PLEASE LOGIN TO KANNADANET.COM FOR REGULAR NEWS-UPDATES

 ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ ಅರಳು ಪ್ರಶಸ್ತಿಯನ್ನು ನೀಡಲು ಕನ್ನಡದ ಯುವ ಬರಹಗಾರರಿಂದ ವಿವಿಧ ಸಾಹಿತ್ಯ ಪ್ರಕಾರಗಳ ಪುಸ್ತಕಗಳನ್ನು ಆಹ್ವಾನಿಸಲಾಗಿದೆ. 
2014 ರ ಆಗಸ್ಟ್-15  ಕ್ಕೆ 35 ವರ್ಷ ಮೀರಿರದ ಕನ್ನಡ ಯುವ ಬರಹಗಾರರು ಸ್ಪರ್ಧೆಯಲ್ಲಿ ಭಾಗವಹಿಸಬಹುದು. ಈ ಸ್ಪರ್ಧೆಯಲ್ಲಿ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ ಹಾಗೂ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ನಾಲ್ಕು ವಲಯಗಳ ಸಿಬ್ಬಂದಿಗಳೂ ಸಹ ಸ್ಪರ್ಧೆಯಲ್ಲಿ ಭಾಗವಹಿಸಬಹುದು. ಕವನ, ಸಣ್ಣಕಥೆ, ಕಾದಂಬರಿ, ನಾಟಕ, ಲಲಿತ ಪ್ರಬಂಧ, ಪರಿಸರ, ವಿನೋದ ಸಾಹಿತ್ಯ, ಅನುವಾದ, ಮಕ್ಕಳ ಸಾಹಿತ್ಯ, ವಿಮರ್ಶೆ/ಸಂಶೋಧನೆ ಈ ಹತ್ತು ಸಾಹಿತ್ಯ ಪ್ರಕಾರಗಳಲ್ಲಿ ಕನ್ನಡದಲ್ಲಿ ರಚಿಸಿದ ಪುಸ್ತಕಗಳನ್ನು ಸ್ಪರ್ಧೆಗೆ ಕಳುಹಿಸಬಹುದಾಗಿದೆ. 2013 ರ ಜನವರಿಯಿಂದ ಡಿಸೆಂಬರ್‍ವರೆಗೆ ಪ್ರಥಮ ಮುದ್ರಣವಾಗಿ ಪ್ರಕಟವಾಗಿರುವ ಪುಸ್ತಕಗಳನ್ನು ಮಾತ್ರ ಸ್ಪರ್ಧೆಗೆ ಪರಿಗಣಿಸಲಾಗುವುದು. ಪ್ರತಿ ಒಂದು ಪ್ರಕಾರಕ್ಕೆ ಪುಸ್ತಕದ ಮೂರು ಪ್ರತಿಗಳನ್ನು ಕಳುಹಿಸಬೇಕು. ಸ್ಪರ್ಧೆಗೆ ಬಂದ ಪುಸ್ತಕಗಳನ್ನು ವಾಪಸ್ಸು ಮಾಡಲಾಗುವುದಿಲ್ಲ. ಆಯ್ಕೆಯಾದ ಪುಸ್ತಕಗಳ ಕರ್ತೃಗಳಿಗೆ ರೂ.15,000/- ನಗದು ಹಾಗೂ ಪ್ರಶಸ್ತಿ ಪತ್ರ ನೀಡಿ ಗೌರವಿಸಲಾಗುವುದು. ಬಹುಮಾನ ನೀಡಲು ಪರಿಷತ್ತು ನೇಮಿಸುವ ತೀರ್ಪುಗಾರರ ತೀರ್ಮಾನ ಅಂತಿಮವಾಗಿರುತ್ತದೆ. ಒಂದಕ್ಕಿಂತ ಹೆಚ್ಚು ಪುಸ್ತಕಗಳು ಅತ್ಯುತ್ತಮವೆಂದು ಪರಿಗಣಿತವಾದರೆ ಬಹುಮಾನದ ಹಣವನ್ನು ಹಂಚಿ ವಿತರಿಸುವ ಹಕ್ಕು ಪರಿಷತ್ತಿಗಿರುತ್ತದೆ. ಪುಸ್ತಕಗಳನ್ನು ಕಳುಹಿಸುವ ವಿಳಾಸ: ಗೌರವ ಕಾರ್ಯದರ್ಶಿ, ಕನ್ನಡ ಸಾಹಿತ್ಯ ಪರಿಷತ್ತು, ಪಂಪ ಮಹಾಕವಿ ರಸ್ತೆ, ಚಾಮರಾಜಪೇಟೆ, ಬೆಂಗಳೂರು-18. ಸ್ಪರ್ಧೆಗೆ ಪುಸ್ತಕಗಳನ್ನು ಕಳುಹಿಸಲು ಅ.31 ಕೊನೆಯ ದಿನವಾಗಿರುತ್ತದೆ. ಹೆಚ್ಚಿನ ಮಾಹಿತಿಗಾಗಿ ಗೌರವ ಕಾರ್ಯದರ್ಶಿ, ಕನ್ನಡ ಸಾಹಿತ್ಯ ಪರಿಷತ್ತು, ಬೆಂಗಳೂರು ಇವರ ದೂರವಾಣಿ ಸಂಖ್ಯೆ: 080-26623584 ಇವರನ್ನು ಸಂಪರ್ಕಿಸಿ ಮಾಹಿತಿ ಪಡೆಯಬಹುದಾಗಿದೆ ಎಂದು ಕನ್ನಡ ಸಾಹಿತ್ಯ ಪರಿಷತ್ತಿನ ಗೌರವ ಕಾರ್ಯದರ್ಶಿ ಸಿ.ಕೆ.ರಾಮೇಗೌಡ ಅವರು ತಿಳಿಸಿದ್ದಾರೆ. 

Advertisement

0 comments:

Post a Comment

 
Top