ಕನಕದಾಸರ ಜಯಂತಿ ಆಚರಣೆ ಕುರಿತು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಸೋಮವಾರ ಏರ್ಪಡಿಸಲಾಗಿದ್ದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು.
ಸಭೆಯಲ್ಲಿ ಭಾಗವಹಿಸಿದ್ದ ಕೊಪ್ಪಳ ಶಾಸಕ ಕೆ. ರಾಘವೇಂದ್ರ ಹಿಟ್ನಾಳ್ ಅವರು ಮಾತನಾಡಿ, ಕನಕದಾಸರ ಜಯಂತಿ ಆಚರಣೆಯ ಅಂಗವಾಗಿ ಕೊಪ್ಪಳ ನಗರದ ಎಲ್ಲ ಪ್ರಮುಖ ರಸ್ತೆಗಳನ್ನು ಸ್ವಚ್ಛಗೊಳಿಸಿ, ಮೆರವಣಿಗೆಗೆ ಸೂಕ್ತ ವ್ಯವಸ್ಥೆ ಕಲ್ಪಿಸಬೇಕು. ಅಲ್ಲದೆ ಮೆರವಣಿಗೆ ಹಾಗೂ ಸಮಾರಂಭದಲ್ಲಿ ಭಾಗವಹಿಸುವವರಿಗೆ ಸೂಕ್ತ ಕುಡಿಯುವ ನೀರಿನ ವ್ಯವಸ್ಥೆ ವ್ಯವಸ್ಥೆಗೊಳಿಸಬೇಕು. ಎಸ್‌ಎಸ್‌ಎಲ್‌ಸಿ ಹಾಗೂ ಪಿಯುಸಿಯಲ್ಲಿ ಅತಿಹೆಚ್ಚು ಅಂಕಗಳಿಸಿ ಉತ್ತೀರ್ಣರಾದ ಸಮಾಜದ ವಿದ್ಯಾರ್ಥಿಗಳಿಗೆ ಹಾಗೂ ಉತ್ತಮ ಸಾಧನೆಗೈದ ಗಣ್ಯರಿಗೆ ಈ ಸಂದರ್ಭದಲ್ಲಿ ಸನ್ಮಾನಿಸಲು ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು. ಅಲ್ಲದೆ ಕಾರ್ಯಕ್ರಮವನ್ನು ಅದ್ಧೂರಿಯಾಗಿ ಆಚರಿಸಲು ಎಲ್ಲರೂ ಸಹಕರಿಸಬೇಕು ಎಂದು ಮನವಿ ಮಾಡಿದರು.
ಸಭೆಯಲ್ಲಿ ಜಿಲ್ಲಾ ಪಂಚಾಯತಿ ಸದಸ್ಯ ಈರಪ್ಪ ಕುಡಗುಂಟಿ, ಅಪರ ಜಿಲ್ಲಾಧಿಕಾರಿ ಡಾ. ಸುರೇಶ್ ಇಟ್ನಾಳ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಕೊಟ್ರಪ್ಪ ಚೋರನೂರ, ಡಿವೈಎಸ್‌ಪಿ ಎಂ. ರಾಜೀವ್, ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು, ಗಣ್ಯರಾದ ಶಿವಾನಂದ ಹೊದ್ಲೂರು, ಡಾ. ಜ್ಞಾನಸುಂದರ್, ಮಂಜುನಾಥ ಗೊಂಡಬಾಳ, ಸಮಾಜದ ಅನೇಕ ಮುಖಂಡರು, ವಿವಿಧ ಸಂಘಟನೆಗಳ ಪದಾಧಿಕಾರಿಗಳು ಭಾಗವಹಿಸಿ ಉಪಯುಕ್ತ ಸಲಹೆ ಸೂಚನೆ ನೀಡಿದರು.
0 comments:
Post a Comment
Click to see the code!
To insert emoticon you must added at least one space before the code.