ಜಿಲ್ಲಾಡಳಿತ, ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ, ಕಾನೂನು ಮಾಪನಶಾಸ್ತ್ರ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಗವಿಸಿದ್ದೇಶ್ವರ ಪದವಿ ಪೂರ್ವ ಕಾಲೇಜು, ಕರ್ನಾಟಕ ಆಹಾರ ಮತ್ತು ನಾಗರಿಕ ಸರಬರಾಜು ನಿಗಮ (ನಿ) ಕೊಪ್ಪಳ ಇವರ ಸಂಯುಕ್ತ ಆಶ್ರಯದಲ್ಲಿ ರಾಷ್ಟ್ರೀಯ ಗ್ರಾಹಕರ ದಿನಾಚರಣೆ ಕಾರ್ಯಕ್ರಮ ಡಿ.೩೦ ರಂದು ಬೆಳಿಗ್ಗೆ ೧೦.೩೦ ಕ್ಕೆ ಕೊಪ್ಪಳದ ಗವಿಸಿದ್ದೇಶ್ವರ ಪದವಿ ಪೂರ್ವ ಕಾಲೇಜು ಅಡಿಟೋರಿಯಂ ಹಾಲ್‌ನಲ್ಲಿ ಏರ್ಪಡಿಸಲಾಗಿದೆ.
ಕಾರ್ಯಕ್ರಮದ ಉದ್ಘಾಟನೆಯನ್ನು ಜಿಲ್ಲಾಧಿಕಾರಿ ಆರ್.ಆರ್. ಜನ್ನು ಅವರು ನೆರವೇರಿಸುವರು. ಅಧ್ಯಕ್ಷತೆಯನ್ನು ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ವೇದಿಕೆ ಅಧ್ಯಕ್ಷ ಕೆ.ವಿ.ಕೃಷ್ಣಮೂರ್ತಿ ಅವರು ವಹಿಸುವರು. ಮುಖ್ಯ ಅತಿಥಿಗಳಾಗಿ ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಕೃಷ್ಣ ಡಿ.ಉದಪುಡಿ, ಅಪರ ಜಿಲ್ಲಾಧಿಕಾರಿ ಡಾ: ಸುರೇಶ ಬಿ.ಇಟ್ನಾಳ, ಪ್ರಾಚಾರ್ಯ ಪರೀಕ್ಷಿತರಾಜ, ವಕೀಲರಾದ ಸಾವಿತ್ರಿ ಮುಜುಮ್‌ದಾರ ಅವರು ಪಾಲ್ಗೊಳ್ಳುವರು. ವಕೀಲರಾದ ವ್ಹಿ.ಎಂ. ಭೂಸನೂರಮಠ ಅವರು ಇದೇ ಸಂದರ್ಭದಲ್ಲಿ ವಿಶೇಷ ಉಪನ್ಯಾಸ ನೀಡುವರು ಎಂದು ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಉಪನಿರ್ದೇಶಕ ವೈ.ಹೆಚ್. ಲಂಬೂ ತಿಳಿಸಿದ್ದಾರೆ.
0 comments:
Post a Comment
Click to see the code!
To insert emoticon you must added at least one space before the code.