ಶಾಲಾ ವಿದ್ಯಾರ್ಥಿನಿಗೆ ಪ್ರೇಮ ಪತ್ರ ಬರೆದುಕೊಟ್ಟ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ಯಲಬುರ್ಗಾ ತಾಲೂಕು ಕಲ್ಲೂರಿನ ಉನ್ನತೀಕರಿಸಿದ ಸರ್ಕಾರಿ ಪ್ರೌಢಶಾಲೆ ಸಹ ಶಿಕ್ಷಕ ಮಂಜಪ್ಪ ಹೆಚ್ ಅವರನ್ನು ಅಮಾನತುಗೊಳಿಸಿ ಡಿಡಿಪಿಐ ಶ್ಯಾಮಸುಂದರ್ ಅವರು ಆದೇಶ ಹೊರಡಿಸಿದ್ದಾರೆ.
ಕಲ್ಲೂರು ಗ್ರಾಮದ ಸರ್ಕಾರಿ ಪ್ರೌಢಶಾಲೆಯ 9 ನೇ ತರಗತಿ ವಿದ್ಯಾರ್ಥಿನಿಗೆ ಪ್ರೇಮ ಪತ್ರ ಬರೆದುಕೊಟ್ಟ ಪ್ರಕರಣವೊಂದು ಬೆಳಕಿಗೆ ಬಂದ ಹಿನ್ನೆಲೆಯಲ್ಲಿ, ಯಲಬುರ್ಗಾದ ಕ್ಷೇತ್ರ ಶಿಕ್ಷಣಾಧಿಕಾರಿಗಳು, ವಿಚಾರಣೆ ಕೈಗೊಂಡು, ಶಿಕ್ಷಕ ಮಂಜಪ್ಪ ಅವರನ್ನು ಅಮಾನತುಗೊಳಿಸುವಂತೆ ಶಿಫಾರಸು ಮಾಡಿದ್ದರು. ಅಲ್ಲದೆ ಡಿಡಿಪಿಐ ಶ್ಯಾಮಸುಂದರ್ ಅವರು ಸಹ ಶಾಲೆಗೆ ಭೇಟಿ ನೀಡಿ ಪರಿಶೀಲಿಸಿದ್ದು, ಶಿಕ್ಷಕ ಮಂಜಪ್ಪ ಕರ್ತವ್ಯಲೋಪ ಎಸಗಿರುವುದು ಮೇಲ್ನೋಟಕ್ಕೆ ಕಂಡುಬಂದಿರುವುದರಿಂದ, ಡಿ. 10 ರಿಂದ ಜಾರಿಗೆ ಬರುವಂತೆ ಶಿಕ್ಷಕ ಮಂಜಪ್ಪ ಅವರನ್ನು ಅಮಾನತುಗೊಳಿಸಿ ಡಿಡಿಪಿಐ ಶ್ಯಾಮಸುಂದರ್ ಅವರು ಆದೇಶ ಹೊರಡಿಸಿದ್ದಾರೆ.

0 comments:
Post a Comment