ಬಿಪಿಎಲ್ ಮತ್ತು ಅಂತ್ಯೋದಯ ಪಡಿತರ ಚೀಟಿದಾರರಿಗೆ ಪಡಿತರ ಚೀಟಿಯಲ್ಲಿರುವ ಸದಸ್ಯರ ಸಂಖ್ಯೆಗನುಗುಣವಾಗಿ ಯಾವುದೇ ಪರಿಮಿತಿ ಇಲ್ಲದೆ ಪ್ರತಿಯೊಬ್ಬ ಸದಸ್ಯನಿಗೆ ಉಚಿತವಾಗಿ ೫ ಕೆ.ಜಿ ಆಹಾರಧಾನ್ಯ (ಅಕ್ಕಿ ೩ ಕೆ.ಜಿ + ಗೋಧಿ ೨ ಕೆ.ಜಿ) ಗಳನ್ನು ನೀಡುವ ಯೋಜನೆ, ಅಲ್ಲದೆ ಪ್ರತಿ ಪಡಿತರ ಕಾರ್ಡಿಗೆ ರೂ: ೨/- ದರದಲ್ಲಿ ಅಯೋಡಿನ್‌ಯುಕ್ತ ಉಪ್ಪು, ಹಾಗೂ ರೂ: ೨೫/- ರಂತೆ ೧ ಲೀಟರ್ ತಾಳೆ ಎಣ್ಣೆಯನ್ನು ವಿತರಿಸುವ ಯೋಜನೆಗೆ ಮೇ. ೦೧ ರಂದು ಜಾರಿಗೆ ಬರಲಿದೆ. ಜಿಲ್ಲಾ ಆಡಳಿತ, ಜಿಲ್ಲಾ ಪಂಚಾಯತಿ ಹಾಗೂ ಆಹಾರ, ನಾಗರಿಕ ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ ಸಂಯುಕ್ತಾಶ್ರಯದಲ್ಲಿ ಅಂದು ಬೆಳಿಗ್ಗೆ ೧೧-೩೦ ಗಂಟೆಗೆ ನಗರದ ಸಾಹಿತ್ಯ ಭವನದಲ್ಲಿ ಸಮಾರಂಭ ಜರುಗಲಿದೆ. ಜಿಲ್ಲಾ ಉಸ್ತುವಾರಿ ಮತ್ತು ಸಣ್ಣ ನೀರಾವರಿ ಸಚಿವ ಶಿವರಾಜ ಎಸ್ ತಂಗಡಗಿ ಅವರು ಸಮಾರಂಭದ ಉದ್ಘಾಟನೆ ನೆರವೇರಿಸುವರು. ಕೊಪ್ಪಳ ಶಾಸಕ ಕೆ. ರಾಘವೇಂದ್ರ ಹಿಟ್ನಾಳ್ ಅವರು ಅಧ್ಯಕ್ಷತೆ ವಹಿಸಲಿದ್ದು, ಸಂಸದ ಸಂಗಣ್ಣ ಕರಡಿ, ಜಿ.ಪಂ. ಅಧ್ಯಕ್ಷ ಅಮರೇಶ್ ಕುಳಗಿ, ಶಾಸಕರುಗಳಾದ ಬಸವರಾಜ ರಾಯರಡ್ಡಿ, ಇಕ್ಬಾಲ್ ಅನ್ಸಾರಿ, ದೊಡ್ಡನಗೌಡ ಪಾಟೀಲ್, ಹಾಲಪ್ಪ ಆಚಾರ್, ಶರಣಪ್ಪ ಮಟ್ಟೂರ್, ಅಮರನಾಥ ಪಾಟೀಲ್, ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಟಿ.ಕೆ. ಅನಿಲಕುಮಾರ್, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಸೈಯದ್ ಜುಲ್ಲು ಖಾದರ್ ಖಾದ್ರಿ, ಜಿ.ಪಂ. ಉಪಾಧ್ಯಕ್ಷ ವಿನಯಕುಮಾರ್ ಮೇಲಿನಮನಿ, ತಾ.ಪಂ. ಅಧ್ಯಕ್ಷೆ ವಿಶಾಲಾಕ್ಷಿ ಮಾಲಿಪಾಟೀಲ್, ನಗರಸಭೆ ಅಧ್ಯಕ್ಷೆ ಬಸಮ್ಮ ಹಳ್ಳಿಗುಡಿ ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳುವರು.
Home
»
Government schemes projects
»
Koppal News
»
koppal organisations
» ಅನ್ನಭಾಗ್ಯ ಯೋಜನೆಯಡಿ ಉಚಿತ ಅಕ್ಕಿ-ಗೋಧಿ : ಮೇ. ೧ ರಂದು ಕೊಪ್ಪಳದಲ್ಲಿ ಚಾಲನೆ
Advertisement
Related Posts
ಬಾಯಾರಿದವನಿಗೆ ನೀರು ಕೊಡುವುದು ಪುಣ್ಯದ ಕೆಲಸ-ವಿಠ್ಠಪ್ಪ ಗೋರಂಟ್ಲಿ.
09 Apr 20160ಕೊಪ್ಪಳ -09- ಹಿಂದಿನ ಕಾಲದಲ್ಲಿ ರಾಜ ಮಹಾರಾಜರು ಅಲ್ಲಲ್ಲ...Read more »
ಬಾಲ್ಯ ವಿವಾಹ ತಡೆಗಾಗಿ ಜಾಗೃತಿ ಜಾಥಾ.
09 Apr 20160ವಿಮೋಚನಾ ಮಕ್ಕಳ ಅಭಿವೃದ್ಧಿ ಯೋಜನೆ ಸಹಯೋಗ ಚೈಲ್ಡ್ ಫಂಡ...Read more »
ಎಪ್ರೀಲ್ ೧೨ ಕ್ಕೆ ಬೆಂಗಳೂರಿನಲ್ಲಿ ಧರಣಿ ಸತ್ಯಾಗ್ರಹ..
09 Apr 20160ಕೊಪ್ಪಳ-09-೨೦೦೬ ಎಪ್ರೀಲ್ ೧ ರ ನಂತರ ನೇಮಕಗೊಂಡ ರಾಜ್ಯ ಸ...Read more »
ಮೇತಗಲ್-ದದೇಗಲ್ ಮಾರ್ಗ ಭಾರತ ಮಾಲಾ ವ್ಯಾಪ್ತಿಗೆ
14 Nov 20182ಕೊಪ್ಪಳ ನ. : ರಾಷ್ಟ್ರೀಯ ಹೆದ್ದಾರಿ ೫೦ ರ ಕೊಪ್ಪಳ ಮೇತಗಲ...Read more »
ಮೇ.೨೧ ರಂದು ಭಯೋತ್ಪಾದನಾ ವಿರೋಧಿ ದಿನ
20 May 20150ಇದೇ ಮೇ. ೨೧ ರಂದು ಭಯೋತ್ಪಾದನಾ ವಿರೋಧಿ ದಿನವನ್ನ...Read more »
Subscribe to:
Post Comments (Atom)
0 comments:
Post a Comment
Click to see the code!
To insert emoticon you must added at least one space before the code.