PLEASE LOGIN TO KANNADANET.COM FOR REGULAR NEWS-UPDATES

ಕೊಪ್ಪಳ, ಸೆ.೧೮ (ಕ ವಾ) ಸರ್ಕಾರಿ ಸೇವೆ ಸಲ್ಲಿಸುವ ಅಧಿಕಾರಿಗಳು ಸಮಾಜಮುಖಿಯಾಗಿ ಕಾರ್ಯನಿರ್ವಹಿಸಲು ಪ್ರಾಮಾಣಿಕ ಪ್ರಯತ್ನ ಮಾಡಬೇಕು ಎಂದು ಕೊಪ್ಪಳ ಜಿಲ್ಲೆಯ ನಿರ್ಗಮಿತ ಜಿಲ್ಲಾಧಿಕಾರಿ ರಮಣದೀಪ್ ಚೌಧರಿ ಅವರು ಹೇಳಿದರು.
     ಹಾವೇರಿ ಜಿಲ್ಲೆಗೆ ಜಿಲ್ಲಾಧಿಕಾರಿಯಾಗಿ ವರ್ಗಾವಣೆಗೊಂಡ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ಏರ್ಪಡಿಸಲಾಗಿದ್ದ ಬೀಳ್ಕೊಡುಗೆ ಸಮಾರಂಭದಲ್ಲಿ ಜಿಲ್ಲಾಡಳಿತದ ವತಿಯಿಂದ ಸನ್ಮಾನ ಸ್ವೀಕರಿಸಿ ಅವರು ಮಾತನಾಡಿದರು.
     ಸರ್ಕಾರಿ ಸೇವೆ ಎಂದರೆ ಸಮಾಜದ ಸೇವೆಯೇ ಆಗಿರುವುದರಿಂದ, ಅಧಿಕಾರಿಗಳು ಸರ್ಕಾರಿ ಚೌಕಟ್ಟಿನಲ್ಲಿ ಸಮಾಜಮುಖಿಯಾಗಿ ಕಾರ್ಯ ನಿರ್ವಹಿಸಬೇಕು.  ಕೊಪ್ಪಳ ಜಿಲ್ಲೆಯಲ್ಲಿ ಕೇವಲ ಒಂದು ತಿಂಗಳ ಅವಧಿಯ ಸೇವೆ ಸಲ್ಲಿಸಿರುವುದರಿಂದ, ಇಲ್ಲಿ ಎಲ್ಲ ಇಲಾಖೆಗಳ ಬಗ್ಗೆ ಗಮನ ಹರಿಸಲು ಸಮಯ ಸಾಕಾಗಲಿಲ್ಲ.  ಕಳೆದ ಆಗಸ್ಟ್ ೧೭ ರಂದು ಜಿಲ್ಲಾಧಿಕಾರಿಯಾಗಿ ಅಧಿಕಾರ ಸ್ವೀಕರಿಸಿದ ಸಂದರ್ಭದಲ್ಲಿ ಜಿಲ್ಲೆಯಲ್ಲಿ ಬಹುತೇಕ ಅಧಿಕಾರಿಗಳು ಹೊಸಬರಾಗಿದ್ದಿದ್ದರಿಂದ, ಜಿಲ್ಲೆಯ ಸ್ಥಿತಿಗತಿ ಅರಿಯಲು ಕಷ್ಟವಾದರೂ, ಬರ ಪರಿಸ್ಥಿತಿ ತೀವ್ರವಾಗಿದ್ದರಿಂದ, ಅದರ ನಿರ್ವಹಣೆಗೆ ಹೆಚ್ಚಿನ ಸಮಯವನ್ನು ಮೀಸಲಿಟ್ಟು, ಪರಿಸ್ಥಿತಿ ನಿಭಾಯಿಸಲು ಪ್ರಾಮಾಣಿಕ ಯತ್ನ ಮಾಡಿದ್ದೇನೆ.  ಕೌಟುಂಬಿಕ ಕಾರಣಗಳಿಂದ ವರ್ಗಾವಣೆ ಬಯಸಿ, ಹಾವೇರಿ ಜಿಲ್ಲೆಗೆ ತೆರಳುತ್ತಿದ್ದೇನೆ ಅಷ್ಟೆ ಎಂದು ರಮಣದೀಪ್ ಚೌಧರಿ ಅವರು ಹೇಳಿದರು.
     ಪ್ರಭಾರಿ ಜಿಲ್ಲಾಧಿಕಾರಿಯಾಗಿ ಅಧಿಕಾರ ವಹಿಸಿಕೊಂಡ ಅಪರ ಜಿಲ್ಲಾಧಿಕಾರಿ ಡಾ. ಪ್ರವೀಣ್‌ಕುಮಾರ್ ಜಿ.ಎಲ್ ಅವರು ಮಾತನಾಡಿ, ನಿರ್ಗಮಿತ ಜಿಲ್ಲಾಧಿಕಾರಿ ರಮಣದೀಪ್ ಚೌದರಿ ಅವರು ಅತ್ಯಲ್ಪ ಅವಧಿಯಲ್ಲಿಯೇ ಜನರ ಮನಸ್ಸನ್ನು ಗೆದ್ದಿದ್ದರು.  ಅವರ ಮಾರ್ಗದರ್ಶನದಲ್ಲಿ ಬರ ಪರಿಸ್ಥಿತಿಯನ್ನು ಸಮರ್ಪಕವಾಗಿ ನಿರ್ವಹಿಸಲು ಪ್ರಾಮಾ
     ಜಂಟಿಕೃಷಿ ನಿರ್ದೇಶಕ ರಾಮದಾಸ್, ಉಪವಿಭಾಗಾಧಿಕಾರಿ ಇಸ್ಮಾಯಿಲ್ ಸಾಹೆಬ್ ಶಿರಹಟ್ಟಿ, ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕ ಬಿ. ಕಲ್ಲೇಶ್, ಜಿಲ್ಲಾ ವಾರ್ತಾಧಿಕಾರಿ ತುಕಾರಾಂರಾವ್ ಬಿ.ವಿ., ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಕೊಟ್ರಪ್ಪ ಅವರು ತಮ್ಮ ಅನಿಸಿಕೆಗಳನ್ನು ವ್ಯಕ್ತಪಡಿಸಿದರು.
     ಬೀಳ್ಕೊಡುಗೆ ಸಮಾರಂಭದಲ್ಲಿ ಜಿ.ಪಂ. ಉಪಕಾರ್ಯದರ್ಶಿ ಎನ್.ಕೆ. ತೊರವಿ, ಆಹಾರ ಇಲಾಖೆ ಉಪನಿರ್ದೇಶಕ ವೈ.ಹೆಚ್. ಲಂಬು, ಜಿಲ್ಲಾ ನೋಂದಣಾಧಿಕಾರಿ ಅಶೋಕ್ ಸೇರಿದಂತೆ ಹಲವು ಅಧಿಕಾರಿಗಳು, ತಾಲೂಕುಗಳ ತಹಸಿಲ್ದಾರರು ಪಾಲ್ಗೊಂಡು, ನಿರ್ಗಮಿತ ಜಿಲ್ಲಾಧಿಕಾರಿಗಳಿಗೆ ಸನ್ಮಾನ ನೆರವೇರಿಸಿದರು.

ಣಿಕ ಯತ್ನ ಮಾಡಿದ್ದೇವೆ.  ಕೆಲವೇ ದಿನಗಳ ಕಾಲ ಅವರು ಜಿಲ್ಲೆಯಲ್ಲಿ ಸೇವೆ ಸಲ್ಲಿಸಿದ್ದರೂ, ಜಿಲ್ಲೆಯೊಂದಿಗೆ ಭಾವನಾತ್ಮಕವಾಗಿ ಹೊಂದಿಕೊಂಡಿದ್ದರು ಎನಿಸುತ್ತದೆ.  ಆದರೂ ವೃತ್ತಿ ಜೀವನದ ಜೊತೆಗೆ ಕುಟುಂಬ ನಿರ್ವಹಣೆಯೂ ಬದುಕಿನಲ್ಲಿ ಮುಖ್ಯವಾಗಿರುವುದರಿಂದ, ಅವರ ವರ್ಗಾವಣೆಗೊಂಡು ಹಾವೇರಿ ಜಿಲ್ಲೆಗೆ ತೆರಳುತ್ತಿದ್ದಾರೆ ಎಂದರು.

Advertisement

0 comments:

Post a Comment

 
Top