PLEASE LOGIN TO KANNADANET.COM FOR REGULAR NEWS-UPDATES

ಕೊಪ್ಪಳ ಸೆ. ೧೬ (ಕ ವಾ) ಕೊಪ್ಪಳ ಜಿಲ್ಲೆಯನ್ನು ಬರ ಪೀಡಿತ ಪ್ರದೇಶ ಎಂದು ಸರ್ಕಾರ ಘೋಷಿಸಿರುವ ಹಿನ್ನೆಲೆಯಲ್ಲಿ ಜಾನುವಾರುಗಳ ರಕ್ಷಣೆಗಾಗಿ ಕೊಪ್ಪಳ ತಾಲೂಕು ಹಾಗೂ ಗಂಗಾವತಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಇರಕಲ್ಲಗಡ ಗ್ರಾಮದಲ್ಲಿ ಪ್ರಾರಂಭಿಸಲಾದ ಗೋಶಾಲೆಗೆ ಶಾಸಕ ಇಕ್ಬಾಲ್ ಅನ್ಸಾರಿ ಅವರು ಚಾಲನೆ ನೀಡಿದರು.
     ಇರಕಲ್ಲಗಡ ಗ್ರಾಮದ ಮಾರುತಿ ದೇವಸ್ಥಾನ ಬಳಿ ಗೋಶಾಲೆ ಪ್ರಾರಂಭಿಸಲಾಗಿದ್ದು, ಸುಮಾರು ೧೮೫ ಜಾನುವಾರುಗಳನ್ನು ಗೋಶಾಲೆಗೆ ರೈತರು ಕರೆತಂದಿದ್ದರು.  ಜಾನುವಾರುಗಳ ರಕ್ಷಣೆಗಾಗಿ ಸರ್ಕಾರ ಗೋಶಾಲೆ ಪ್ರಾರಂಭಿಸಿದ್ದು, ರೈತರು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ಶಾಸಕ ಇಕ್ಬಾಲ್ ಅನ್ಸಾರಿ ಅವರು ಹೇಳಿದರು.
     ಉಪವಿಭಾಗಾಧಿಕಾರಿ ಇಸ್ಮಾಯಿಲ್ ಸಾಹೆಬ್ ಶಿರಹಟ್ಟಿ, ಪಶುಸಂಗೋಪನೆ ಇಲಾಖೆ ಉಪನಿರ್ದೇಶಕ ಡಾ. ಭಾಸ್ಕರನಾಯಕ್, ಕೊಪ್ಪಳ ತಹಸಿಲ್ದಾರ್ ಪುಟ್ಟರಾಮಯ್ಯ ಸೇರಿದಂತೆ ಹಲವು ಗಣ್ಯರು, ಅಧಿ
ಕಾರಿಗಳು ಉಪಸ್ಥಿತರಿದ್ದರು.

Advertisement

0 comments:

Post a Comment

 
Top