PLEASE LOGIN TO KANNADANET.COM FOR REGULAR NEWS-UPDATES

ಕೊಪ್ಪಳ ಸೆ. ೧೪ (ಕ ವಾ) ಮಾರಕ ರೋಗಗಳಿಂದ ಮುಕ್ತಿ ಹೊಂದಲು ಮಿಶನ್ ಇಂದ್ರಧನುಷ್  ಲಸಿಕಾ ಕಾರ್ಯಕ್ರಮದ ಅಡಿ ನೀಡಲಾಗುವ  ಎಲ್ಲಾ ಲಸಿಕೆಗಳನ್ನು ಪ್ರತಿಯೊಂದು ಮಗುವಿಗೂ ತಪ್ಪದೆ ಹಾಕಿಸುವ ಪ್ರಕ್ರಿಯೆ ಆಂದೋಲನ ರೂಪದಲ್ಲಿ ಸಾಗಬೇಕಿದೆ ಎಂದು ಜಿಲ್ಲಾ ಪಂಚಾಯತಿ ಸದಸ್ಯೆ ಹೇಮಲತಾ ಅಂದಾನಗೌಡ ಪೋಲಿಸ್ ಪಾಟೀಲ್ ಕರೆ ನೀಡಿದರು.
ಯಲಬುರ್ಗಾ ತಾಲೂಕಿನ ಬಳೂಟಗಿ ಗ್ರಾಮದಲ್ಲಿ ಕೇಂದ್ರ ಸರಕಾರದ ಕ್ಷೇತ್ರ ಪ್ರಚಾರ ನಿರ್ದೇಶನಾಲಯ ಧಾರವಾಡ ಮತ್ತು ಮೈಸೂರು, ತಾಲೂಕಾ ಪಂಚಾಯತಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಆರೋಗ್ಯ ಇಲಾಖೆ, ಸಾರ್ವಜನಿಕ ಶಿಕ್ಷಣ ಇಲಾಖೆ, ಸಂಗೀತ ಮತ್ತು ನಾಟಕ ವಿಭಾಗ ಬೆಂಗಳೂರು, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಮತ್ತು ಗ್ರಾಮ ಪಂಚಾಯತ ಬಳೂಟಗಿ ಇವರ  ಸಹಯೋಗದಲ್ಲಿ ತಾಯಿ-ಮಗುವಿನ ಆರೋಗ್ಯ ಮತ್ತು ಮಿಶನ್ ಇಂದ್ರಧನುಷ್ ಬಗ್ಗೆ  ಆಯೋಜಿಸಲಾಗಿದ್ದ ಜಾಗೃತಿ ಕಾರ್ಯಕ್ರಮವನ್ನು  ಉದ್ಘಾಟಿಸಿ ಅವರು ಮಾತನಾಡಿದರು. ತಾಯಿ ಮಗುವಿನ ಆರೋಗ್ಯ ಕಾಪಾಡಿಕೊಳ್ಳಲು ವಿವಿಧ ಇಲಾಖೆಗಳಿಂದ ಸಾಕಷ್ಟು ಸೌಲಭ್ಯಗಳಿದ್ದು ಇವುಗಳನ್ನು ಸದುಪಯೋಗ ಪಡಿಸಿಕೊಳ್ಳಬೇಕೆಂದು ಹೇಮಲತಾ ಅವರು ಮನವಿ ಮಾಡಿದರು.
     ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದ ಬಳೂಟಗಿ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ. ಎಸ್.ಕೆ .ದೇಸಾಯಿ ಅವರು, ಮಿಶನ್ ಇಂದ್ರಧನುಷ್ ಅಡಿ ಕೊಪ್ಪಳ ಜಿಲ್ಲೆಯಲ್ಲಿ ಮಕ್ಕಳಿಗೆ ಅಗತ್ಯವಿರುವ ೯ ಲಸಿಕೆಗಳನ್ನು ಹಾಕಲಾಗುತ್ತಿದ್ದು, ಮಕ್ಕಳಿಗೆ ತಪ್ಪದೇ ಎಲ್ಲ ಲಸಿಕೆಗಳನ್ನು ಹಾಕಿಸಿ ಮಾರಕ ರೋಗಗಳಿಂದ ರಕ್ಷಿಸಿಬೇಕು ಎಂದು ತಿಳಿಸಿದರು. ಕೊಪ್ಪಳ ಜಿಲ್ಲೆಯಲ್ಲಿ ಲಸಿಕಾ ಕಾರ್ಯಕ್ರಮಕ್ಕೆ ಸಾರ್ವಜನಿಕರಿಂದ ಸೂಕ್ತ ಪ್ರತಿಕ್ರಿಯೆ ಸಿಗುತ್ತಿಲ್ಲವೆಂಬ ಆರೋಪವನ್ನು ದೂರ ಮಾಡಬೇಕಾದ ಜವಾಬ್ದಾರಿ ಆರೋಗ್ಯ ಇಲಾಖೆ ಸಿಬ್ಬಂದಿ ಮತ್ತು ಜಿಲ್ಲೆಯ ಜನತೆ ಮೇಲಿದೆ ಎಂದರು.
ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳಾದ ಲಲಿತಾ ನಾಯ್ಕರ್ ಮಾತನಾಡಿ, ಅಂಗನವಾಡಿ ಕೇಂದ್ರಗಳಲ್ಲಿ ವಿತರಿಸುವ ಆಹಾರದ ಜೊತೆಗೆ ಇನ್ನೂ ಹೆಚ್ಚಿನ ಪೌಷ್ಠಿಕಾಂಶವಿರುವ ಆಹಾರವನ್ನು ಸೇವಿಸುವ ಮೂಲಕ ಗರ್ಭೀಣಿಯರು ಒಳ್ಳೆಯ ಆರೋಗ್ಯ ಪಡೆಯಬೇಕು.  ಇದರಿಂದ ತಾಯಿ ಮತ್ತು ಮಗುವಿನ ಆರೋಗ್ಯ ಉತ್ತಮಗೊಳ್ಳಲಿದೆ ಎಂದು ನುಡಿದರು.
ಬಳೂಟಗಿ ಪ್ರಾಥಮಿಕ ಆರೋಗ್ಯ ಕೇಂದ್ರದ ಹಿರಿಯ ಆರೋಗ್ಯ ಅಧೀಕ್ಷಕ ಮ್ಯಾಗೇರಿಯವರು ಮಾತನಾಡಿ ಯಾವುದೇ ಕಾರಣಕ್ಕೂ ಹೆರಿಗೆಯನ್ನು ಆಸ್ಪತ್ರೆಯಲ್ಲಿಯೇ ಮಾಡಿಸಬೇಕು, ಇದರಿಂದ ಹೆರಿಗೆ ಸಮಯದಲ್ಲಿ ಆಗಬಹುದಾದ ಸಂಭಾವ್ಯ ಅಪಾಯವನ್ನು ತಪ್ಪ್ಪಿಸಬಹುದಾಗಿದೆ ಎಂದರು.  ಯಲಬುರ್ಗಾ ತಾಲೂಕಾ ಪಂಚಾಯತಿ ಸಹಾಯಕ ನಿರ್ದೇಶಕ ಸತೀಶ ಮಾತನಾಡಿ ಜಿಲ್ಲೆಯಲ್ಲಿ ಬಹಳಷ್ಟು ಮಂದಿ ಇನ್ನೂ ಸಹ ಬಯಲು ಮಲ ವಿಸರ್ಜನೆಯಲ್ಲಿ ತೊಡಗಿರು
 ಕಾರ್ಯಕ್ರಮದ ಅಧ್ಯಕ್ಷತೆಯನ್ನು ಗ್ರಾಮ ಪಂಚಾಯತ ಅಧ್ಯಕ್ಷೆ ನೀಲಮ್ಮ ಯರಗೇರಿ ವಹಿಸಿಕೊಂಡಿದ್ದರು. ಗ್ರಾಮದ ಸರಕಾರಿ ಪ್ರೌಢ ಶಾಲಾ ಮಕ್ಕಳಿಂದ ಏರ್ಪಡಿಸಿದ್ದ ಜಾಗೃತಿ ಜಾಥಾ ಕಾರ್ಯಕ್ರಮಕ್ಕೆ ಗ್ರಾಮ ಪಂಚಾಯತ ಉಪಾಧ್ಯಕ್ಷೆ ಚಂದ್ರಿಕಾ ಮಾಲಿಪಾಟೀಲ್ ಚಾಲನೆ ನೀಡಿದರು. ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯತಿಯ ಸರ್ವ ಸದಸ್ಯರು, ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರು, ಆಶಾ ಕಾರ್ಯಕರ್ತೆಯರು ಪಾಲ್ಗೊಂಡಿದ್ದರು. ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿ ಪುಟ್ಟಪ್ಪ ಫಕೀರಪ್ಪ ಸ್ವಾಗತಿಸಿದರು. ಪ್ರೌಢ ಶಾಲೆಯ ಶಿಕ್ಷಕ ಶಂಕ್ರಪ್ಪ ಕುಂಟೊಜಿ ಕಾರ್ಯಕ್ರಮ ನಿರೂಪಿಸಿ ವಂದಿಸಿದರು.



ವುದು ಉತ್ತಮ ಆರೋಗ್ಯ ಪೂರ್ಣ ಸಮಾಜ  ನಿರ್ಮಾಣಕ್ಕೆ ತೊಡಕಾಗಿದೆ. ಇದು ಸಹ ನೇರವಾಗಿ ತಾಯಿ ಮಗುವಿನ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುತ್ತಿದೆ ಎಂದು ಎಚ್ಚರಿಸಿದರು. ಮುಂದಿನ ದಿನಗಳಲ್ಲಾದರೂ ವೈಯಕ್ತಿಕ ಶೌಚಾಲಯಗಳನ್ನು ನಿರ್ಮಿಸಿ, ಬಳಸುವ ಮೂಲಕ ಆರೋಗ್ಯ ಕಾಪಾಡಿಕೊಳ್ಳಬೇಕು ಎಂದು ತಿಳಿಸಿದರು. ಕ್ಷೇತ್ರ ಪ್ರಚಾರ ನಿರ್ದೇಶನಾಲಯದ ಸಿ.ಕೆ ಸುರೇಶರವರು ಪ್ರಾಸ್ತಾವಿಕವಾಗಿ ಮಾತನಾಡಿದರು.

Advertisement

0 comments:

Post a Comment

 
Top