ಕೊಪ್ಪಳ-18- ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಏರ್ಪಡಿಸಲಾಗಿದ್ದ ಮಹಿಳಾ ಸ್ವ-ಸಹಾಯ ಸಂಘಗಳಿಗೆ ಸರ್ಕಾರದ ಸಂಜೀವಿನಿ ಎನ್.ಆರ್.ಎಲ್.ಎಂ. ಬಡ್ಡಿ ಸಹಾಯಧನ ವಿತರಣಾ ಕಾರ್ಯಕ್ರಮದಲ್ಲಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಕಾರ್ಯನಿರ್ವಾಹಕ ನಿರ್ದೇಶಕರಾದ ಡಾ|| ಎಲ್.ಎಚ್.ಮಂಜುನಾಥ ರವರು ಮಹಿಳಾ ಸ್ವ-ಸಹಾಯ ಸಂಘಗಳು ಬ್ಯಾಂಕನಿಂದ ಆರ್ಥಿಕ ಸಹಾಯವನ್ನು ಪಡೆದು ತನ್ನಲ್ಲಿ ಲಭ್ಯವಿರುವ ಸಂಪನ್ಮೂಲಗಳನ್ನು ಸದುಪಯೋಗಪಡಿಸಿಕೊಂಡು ಆದಾಯ ಉತ್ಪನ್ನ ಚಟುವಟಿಕೆ ಮೂಲಕ ಆರ್ಥಿಕವಾಗಿ ಸ್ವಾವಲಂಬನೆ ಸಾಧಿಸುವಂತಾಗಬೇಕು ಕೊಪ್ಪಳ ಜಿಲ್ಲೆಯಲ್ಲಿ ಯೂನಿಯನ್ ಬ್ಯಾಂಕಿನಂದ ಆರ್ಥಿಕ ಸಹಾಯಪಡೆದ ೬೧೭೭ ಗ್ರಾಮಾಭಿವೃದ್ಧಿ ಯೋಜನೆ ಸ್ವ-ಸಹಾಯ ಸಂಘಗಳಿಗೆ ಸರ್ಕಾರದ ಎನ್.ಆರ್.ಎಲ್.ಎಂ. ಕಾರ್ಯಕ್ರಮದಡಿ ೧.೪೭ ಕೋಟಿ ಬಡ್ಡಿ ಸಹಾಯಧನ ಸಂಘದ ಸಾಲದ ಖಾತೆಗೆ ಜಮೆ ಮಾಡಿದ್ದು ಕೊಪ್ಪಳ ಜಿಲ್ಲೆ ರಾಜ್ಯದಲ್ಲಿಯೇ ಅತ್ಯಧಿಕ ಬಡ್ಡಿ ಸಹಾಯಧನ ದೊರೆತ ಜಿಲ್ಲೆ ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯತ್ ಯೋಜನಾ ನಿರ್ದೇಶಕ ರವಿ ಬಸರಿಹಳ್ಳಿ ಗ್ರಾಮಾಭಿವೃದ್ಧಿ ಯೋಜನೆ ಸ್ವ-ಸಹಾಯ ಸಂಘಗಳು ಉತ್ತಮ ರೀತಿಯ ಕಾರ್ಯ ಚಟುವಟಿಕೆ ಮೂಲಕ ನಿರ್ವಹಣೆಯಾಗುತ್ತಿದ್ದು ಸರ್ಕಾರದ ಸೌಲಭ್ಯವನ್ನು ಸದುಪಯೋಗ ಮಾಡಿಕೊಳ್ಳಬೇಕೆಂದು ತಿಳಿಸಿದರು. ಕಾರ್ಯಕ್ರಮದಲ್ಲಿ ಪ್ರಾದೇಶಿಕ ನಿರ್ದೇಶಕರಾದ ಕೆ.ಬೂದಪ್ಪಗೌಡ, ಜಿಲ್ಲಾ ನಿರ್ದೇಶಕ ಮುರಳೀಧರ್.ಹೆಚ್.ಎಲ್. ಎನ್.ಆರ್.ಎಲ್.ಎಂ. ಜಿಲ್ಲಾ ಕಾರ್ಯಕ್ರಮ ವ್ಯವಸ್ಥಾಪಕ ರಾಜು ಕಾತರಕಿ,ಯೋಜನಾಧಿಕಾರಿಗಳಾದ ದಿನೇಶ,ಹರೀಶ,ಸುರೇಂದ್ರ,ಸದಾಶಿವಗೌಡ ಉಪಸ್ಥಿತರಿದ್ದರು. ಜಿಲ್ಲಾ ವ್ಯವಸ್ಥಾಪಕರಾದ ನಾಗರಾಜ ಕಾರ್ಯಕ್ರಮ ನಿರೂಪಿಸಿ ವಂದಿಸಿದರು.

0 comments:
Post a Comment
Click to see the code!
To insert emoticon you must added at least one space before the code.