PLEASE LOGIN TO KANNADANET.COM FOR REGULAR NEWS-UPDATES

ಕೊಪ್ಪಳ ಅ. ೦೭ (ಕ ವಾ)  ಪದವಿಪೂರ್ವ ಶಿಕ್ಷಣ ಇಲಾಖೆ ಹಾಗೂ ಅಳವಂಡಿಯ ಸಿದ್ದೇಶ್ವರ ಸಂಯುಕ್ತ ಪ.ಪೂ. ಮಹಾವಿದ್ಯಾಲಯ ಇವರ ಸಂಯುಕ್ತ ಆಶ್ರಯದಲ್ಲಿ ರಾಷ್ಟ್ರೀಯ ಸೇವಾ ಯೋಜನೆಯ ವಿಶೇಷ ಶಿಬಿರ ಅ. ೦೮ ರಿಂದ ೧೪ ರವರೆಗೆ ತಾಲೂಕಿನ ನಿಲೋಗಿಪುರ ಗ್ರಾಮದಲ್ಲಿ ಏರ್ಪಡಿಸಲಾಗಿದೆ.
     ಎನ್‌ಎಸ್‌ಎಸ್ ಶಿಬಿರದ ಉದ್ಘಾಟನೆ ಅ. ೦೮ ರಂದು ಬೆಳಿಗ್ಗೆ ೧೧ ಗಂಟೆಗೆ ನಿಲೋಗಿಪುರ ಗ್ರಾಮದ ಸರ್ಕಾರಿ ಹಿ.ಪ್ರಾ.ಶಾಲೆ ಆವರಣದಲ್ಲಿ ನಡೆಯಲಿದೆ.  ಅಳವಂಡಿಯ ಕರ್ನಾಟಕ ವಿದ್ಯಾವರ್ಧಕ ಸಮಿತಿ ಕಾರ್ಯದರ್ಶಿ ರೇವಣಸಿದ್ದೇಶ್ವರ ಸ್ವಾಮಿ ಕಟ್ಟಿಮನಿ ಹಿರೇಮಠ ಅವರು ಉದ್ಘಾಟನೆ ನೆರವೇರಿಸುವರು.  ಸಮಿತಿಯ ಅಧ್ಯಕ್ಷರಾದ ಭುಜಂಗಸ್ವಾಮಿಗಳು ಇನಾಮದಾರ ಅವರು ಕಾರ್ಯಕ್ರಮದ ಅಧ್ಯಕ್ಷತೆ  ವಹಿಸುವರು.  ಪದವಿಪೂರ್ವ ಶಿಕ್ಷಣ ಇಲಾಖೆ ಉಪನಿರ್ದೇಶಕ ಟಿ. ಶಿವಮೂರ್ತಿ, ಬೋಚನಹಳ್ಳಿ ಗ್ರಾ.ಪಂ. ಅಧ್ಯಕ್ಷೆ ಅನಸಮ್ಮ ಬಿಸನಳ್ಳಿ, ಜಿ.ಪಂ. ಸದಸ್ಯ ನಾಗನಗೌಡ ಮಾಲಿ ಪಾಟೀಲ, ತಾ.ಪಂ. ಸದಸ್ಯ ವಿರೇಶ್ ಸಜ್ಜನರ ಸೇರಿದಂತೆ ಹಲವು ಗಣ್ಯರು ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳುವರು.  ಎನ್‌ಎಸ್‌ಎಸ್ ಶಿಬಿರದ ಅಂಗವಾಗಿ ಅ. ೦೯ ರಂದು ವಿಶ್ರಾಂತ ಪ್ರಾಚಾರ್ಯ ಎ.ಟಿ. ಕಲ್ಮಠ ಅವರು ರಾಷ್ಟ್ರ ನಿರ್ಮಾಣದಲ್ಲಿ ಶಿಕ್ಷಕರ ಪಾತ್ರ ಕುರಿತು ವಿಶೇಷ ಉಪನ್ಯಾಸ ನೀಡುವರು.  ಅ. ೧೦ ರಂದು ಹೈದ್ರಾಬಾದ್-ಕರ್ನಾಟಕ ವಿಶೇಷ ಸ್ಥಾನಮಾನ ಕಲ್ಪಿಸುವ ಸಂವಿಧಾನದ ೩೭೧ (ಜೆ) ಕಲಂ ತಿದ್ದುಪಡಿಯಿಂದ ದೊರೆಯುವ ಸೌಲಭ್ಯಗಳ ಕುರಿತು ಹೈ-ಕ ಹೋರಾಟ ಸಮಿತಿ ಮುಖಂಡ ಶರಣಪ್ಪ ಜಡಿ ಅವರು.  ಅ. ೧೧ ರಂದು ಭವ್ಯ ಭಾರತ ನಿರ್ಮಾಣದಲ್ಲಿ ಯುವಜನತೆಯ ಪಾತ್ರ ಕುರಿತು ವೈದ್ಯಾಧಿಕಾರಿ ಡಾ. ಪಿ.ಬಿ. ಹಿರೇಗೌಡ್ರ ಅವರು.  ಅ. ೧೨ ರಂದು ಯುವಜನತೆಯಲ್ಲಿ ವೈಚಾರಿಕತೆ ಹಾಗೂ ವೈಜ್ಞಾನಿಕ ಮನೋಭಾವ ಕುರಿತು ವಿಶ್ರಾಂತ ಉಪನ್ಯಾಸಕ ಎ.ವೈ. ನವಲಗುಂದ ಅವರು.  ಅ. ೧೩ ರಂದು ಸಾಮಾಜಿಕ ಮತ್ತು ಆರ್ಥಿಕ ಬೆಳವಣಿಗೆಯಲ್ಲಿ ಜಾನುವಾರುಗಳ ಪಾತ್ರ ವಿಷಯ ಕುರಿತು ಪಶು ಆಸ್ಪತ್ರೆ ಸಹಾಯಕ ನಿರ್ದೇಶಕ ಡಾ. ವಿಜಯಕುಮಾರ ಉಂಕಿ ಅವರು ವಿಶೇಷ ಉಪನ್ಯಾಸ ನೀಡುವರು.  ಅ. ೧೪ ರಂದು ಶಿಬಿರದ ಸಮಾರೋಪ ಸಮಾರಂಭ ಜರುಗಲಿದ್ದು, ಬಸಯ್ಯ ನಂದಯ್ಯ ಹಿರೇಮಠ ಅವರು ಸಮಾರಂಭದ ಅಧ್ಯಕ್ಷತೆ ವಹಿಸುವರು ಎಂದು ರಾಷ್ಟ್ರೀಯ ಸೇವಾ ಯೋಜನೆ ಕಾರ್ಯಕ್ರಮಾಧಿಕಾರಿ ಎಂ.ಎಸ್. ಹೊಟ್ಟಿನ್ ಹಾಗೂ ಪ್ರಾಚಾರ್ಯ ವಿ.ಸಿ. ಬೆನ್ನಳ್ಳಿ ಅವರು ತಿಳಿಸಿದ್ದಾರೆ.


Advertisement

0 comments:

Post a Comment

 
Top