PLEASE LOGIN TO KANNADANET.COM FOR REGULAR NEWS-UPDATES

ಕೊಪ್ಪಳ-31- ಕಿನ್ನಾಳ, ಗ್ರಾಮೀಣ ಭಾಗದ ರೈತರ ಆರ್ಥಿಕ ಅಭಿವೃದ್ಧಿಯಲ್ಲಿ ಕೃಷಿ ಪತ್ತಿನ ಸಹಕಾರ ಸಂಘಗಳ ಪಾತ್ರ ಗಣನೀಯವಾಗಿದ್ದು, ಕಿನ್ನಾಳ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ರಾಜ್ಯದಲ್ಲಿ ಮಾದರಿ ಸಹಕಾರ ಸಂಘವಾಗಿ ಕಾರ್ಯನಿರ್ವಹಿಸುತ್ತದೆ. ಗ್ರಾಮೀಣ ಮಟ್ಟದ ಸಣ್ಣ ರೈತರಿಗೆ ಕೃಷಿ ಸಾಲ ನೀಡಿ, ಗ್ರಾಮೀಣ ಅಭಿವೃದ್ಧಿಯನ್ನು ಕೃಷಿ ಪತ್ತಿನ ಸಹಕಾರ ಸಂಘಗಳು ಪ್ರಮುಖ ಪಾತ್ರ ನಿರ್ವಹಿಸುತ್ತಿವೆ. ಅಂತಹ ಸಂಘಗಳನ್ನು ಮುನ್ನಡಿಸುವಲ್ಲಿ ಮುಖ್ಯಕಾರ್ಯನಿರ್ವಾಹಕರ ಪಾತ್ರ ಗಣನೀಯವಾಗಿದ್ದು ಇಂಥಹ ತರಬೇತಿಯ ಸದುಪಯೋಗ ಪಡೆದುಕೊಂಡು ಪ್ರಾಮಾಣಿಕವಾಗಿ ಕಾರ್ಯನಿರ್ವಹಿಸಿ ಸಹಕಾರ ಕ್ಷೇತ್ರದ ಅಭಿವೃದ್ಧಿಗಾಗಿ ಶ್ರಮಿಸಬೇಕೆಂದು ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ ಶ್ರೀಮತಿ ಶಕುಂತಲಾ ಹೆಚ್. ಹುಡೇಜಾಲಿಯವರು ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡಿದರು. 
ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ ನಿ., ಬೆಂಗಳೂರು, ಕೊಪ್ಪಳ ಜಿಲ್ಲಾ ಸಹಕಾರ ಯೂನಿಯನ್ ನಿ., ಕೊಪ್ಪಳ, ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ನಿ., ಕಿನ್ನಾಳ ಹಾಗೂ ಸಹಕಾರ ಇಲಾಖೆ ಕೊಪ್ಪಳ ಇವರುಗಳ ಸಂಯುಕ್ತ ಆಶ್ರಯದಲ್ಲಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ನಿ., ಕಿನ್ನಾಳದಲ್ಲಿ ಕೊಪ್ಪಳ ಮತ್ತು ಯಲಬುರ್ಗಾ ತಾಲೂಕಿನ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳ ಮುಖ್ಯಕಾರ್ಯನಿರ್ವಾಹಕರುಗಳಿಗೆ ಒಂದು ದಿನದ ತರಬೇತಿ ಕಾರ್ಯಗಾರವನ್ನು ಹಮ್ಮಿಕೊಳ್ಳಲಾಗಿತ್ತು.
ಶ್ರೀ ರಮೇಶ ವೈದ್ಯ. ನಿರ್ದೇಶಕರು, ಆರ್.ಡಿ.ಸಿ.ಬ್ಯಾಂಕ್ ಲಿ., ರಾಯಚೂರು ಇವರು ಉದ್ಘಾಟಿಸಿ, ಮಾತನಾಡುತ್ತಾ ಸಹಕಾರ ಕ್ಷೇತ್ರದಲ್ಲಿರುವ ಪ್ರತಿಯೊಬ್ಬರು ಪ್ರಾಮಾಣಿಕವಾಗಿ ನಿಶ್ವಾರ್ತತೆಯಿಂದ ಕಾರ್ಯನಿರ್ವಹಿಸಿ, ಸಹಕಾರ ಕ್ಷೇತ್ರದ ಅಭಿವೃದ್ಧಿಗೆ ಶ್ರಮಿಸಬೇಕು ಹಾಗೂ ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ತಂತ್ರಜ್ಞಾನವನ್ನು ಅಳವಡಿಸಿಕೊಂಡು ಸದಸ್ಯರಿಗೆ ಉತ್ತಮ ಸೇವೆಯನ್ನು ನೀಡಿ, ಸಹಕಾರ ಸಂಸ್ಥೆಗಳನ್ನು ಬಲ ಪಡಿಸಬೇಕೆಂದು ಕರೆನೀಡಿದರು.
ಕಾರ್ಯಕ್ರಮದಲ್ಲಿ ಕಿನ್ನಾಳ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷರಾದ ವೀರೇಶ ತಾವರಗೇರಿ ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿದರು. ಹಾಗೂ ಜಿಲ್ಲಾ ಸಹಕಾರ ಯೂನಿಯನ್ ನಿರ್ದೇಶಕರಾದ, ಅಮರೇಶ ಉಪಲಾಪೂರ ರವರು ಮಾತನಾಡುತ್ತಾ ಸ್ವ-ಸಹಾಯ ಸಂಘಗಳ ಮೂಲಕ ಮಹಿಳೆಯರು ಹೆಚ್ಚು ಆರ್ಥಿಕವಾಗಿ ಸ್ವಾವಲಂಬಿಗಳಾಗಲು ಸಾಧ್ಯವಾಗಿದ್ದು, ಕಿನ್ನಾಳ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ಅನೇಕ ಸ್ವ-ಸಹಾಯ ಸಂಘಗಳನ್ನು ರಚನೆ ಮಾಡಿ ಆರ್ಥಿಕ ಸಹಾಯ ಸೌಲಭ್ಯ ನೀಡಿ ಮಹಿಳೆಯರ ಅಭಿವೃದ್ಧಿಗಾಗಿ ಶ್ರಮಿಸುತ್ತಿದೆ. ಸಹಕಾರ ಕ್ಷೇತ್ರದ ಅಭಿವೃದ್ಧಿಗಾಗಿ ಜಿಲ್ಲಾ ಸಹಕಾರ ಯೂನಿಯನ್ ಮೂಲಕ ಅನೇಕ ತರಬೇತಿ ಕಾರ್ಯಕ್ರಮಗಳನ್ನು ಜರುಗಿಸುತ್ತಿದ್ದು ಅದರ ಸದುಪಯೋಗ ಪಡೆದುಕೊಳ್ಳಬೇಕೆಂದು ಕರೆನೀಡಿದರು.
ಕಾರ್ಯಕ್ರಮದಲ್ಲಿ ಮುಖ್ಯತಿಥಿಗಳಾಗಿ, ಜಿಲ್ಲಾ ಸಹಕಾರ ಯೂನಿಯನ್ ಉಪಾಧ್ಯಕ್ಷರಾದ, ಹನುಮಪ್ಪ ಉಪ್ಪಾರ., ಜಿಲ್ಲಾ ಸಹಕಾರ ಯೂನಿಯನ್ ನಿರ್ದೇಶಕರುಗಳಾದ, ತೋಟಪ್ಪ ಕಾಮನೂರು, ಗವಿಸಿದ್ದೇಶ ಹುಡೇಜಾಲಿ, ಸಹಕಾರ ಸಂಘಗಳ ಸಹಾಯಕ ನಿಬಂಧಕರಾದ ಎಸ್.ಕೆ.ಸಿದ್ನೆಕೊಪ್ಪ, ಜಿಲ್ಲಾ ಸಹಕಾರ ಯೂನಿಯನ್ ಮುಖ್ಯಕಾರ್ಯನಿರ್ವಹಣಾಧಿಕಾರಿಗಳಾದ, ಶರಣಬಸಪ್ಪ ಕಾಟ್ರಳ್ಳಿ., ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ನಿ., ಕಿನ್
ಕಾರ್ಯಕ್ರಮದಲ್ಲಿ ಡಿಸಿಸಿ ಬಾಂಕ್ ನಿ, ರಾಯಚೂರು ಇದರ ಆಂತರಿಕ ಲೆಕ್ಕಪರಿಶೋಧಕರಾದ ಬಿ. ರಾಮಸ್ವಾಮಿ ರವರು ವ್ಯಾಪಾರ ಅಭಿವೃದ್ಧಿ ಯೋಜನೆ, ಎನ್.ಪಿ.ಎ., ದುಡಿಯುವ ಬಂಡವಾಳ, ಬಂಡವಾಳ ಕೃಢೀಕರಣ ಕುರಿತು ಉಪನ್ಯಾಸ ನೀಡಿದರು. ಮತ್ತು ಸಹಕಾರ ಸಂಘಗಳ ಸಹಾಯಕ ನಿಬಂಧಕರಾದ ಎಸ್.ಕೆ.ಸಿದ್ನೆಕೊಪ್ಪ ರವರು ಸಹಕಾರ ಕಾಯ್ದೆ ಇತ್ತೀಚಿನ ತಿದ್ದುಪಡಿ ಹಾಗೂ ಯಶಸ್ವಿನಿ ಆರೋಗ್ಯ ವಿಮಾ ಯೋಜನೆ ಕುರಿತು ಉಪನ್ಯಾಸ ನೀಡಿದರು.
ಕಾರ್ಯಕ್ರಮದಲ್ಲಿ ಜಿಲ್ಲಾ ಸಹಕಾರ ಯೂನಿಯನ್ ಮುಖ್ಯಕಾರ್ಯನಿರ್ವಹಣಾಧಿಕಾರಿಗಳಾದ ಶರಣಬಸಪ್ಪ ಕಾಟ್ರಳ್ಳಿಯವರು ಪ್ರಾಸ್ತಾವಿಕವಾಗಿ ಮಾತನಾಡಿ ಕಾರ್ಯಕ್ರಮ ನಿರೂಪಿಸಿದರು. ಅತಿಥಿಗಳನ್ನು ಜಿಲ್ಲಾ ಸಹಕಾರ ಯೂನಿಯನ್ ನಿರ್ದೇಶಕರಾದ ತೋಟಪ್ಪ ಕಾಮನೂರ ರವರು ಸ್ವಾಗತಿಸಿದರು. ಜಿಲ್ಲಾ ಸಹಕಾರ ಯೂನಿಯನ್ ನಿರ್ದೇಶಕರಾದ, ಗವಿಸಿದ್ದೇಶ ಹುಡೇಜಾಲಿ ಯವರು ವಂದಿಸಿದರು. 
ನಾಳದ ಉಪಾಧ್ಯಕ್ಷರಾದ ವಿಜಯ ಕಲಾಲ, ನಿರ್ದೇಶಕರುಗಳಾದ ಮಹಾದೇವಯ್ಯ ಹಿರೇಮಠ, ಕೆ.ಮಲ್ಲಿಕಾರ್ಜುನ, ದೇವಪ್ಪ ಹಳ್ಳಿಕೇರಿ, ಅಶೋಕ ಚಿತ್ರಗಾರ, ಶಕುಂತಲಾ ಕುದ್ರಿಮೋತಿ, ಮಲ್ಲಮ್ಮ ಕಾರಬ್ಯಾಳಿ, ಡಿಸಿಸಿ ಬ್ಯಾಂಕಿನ ಹೆಚ್.ಎಸ್.ಪಾಟೀಲ್, ಶ್ರೀಧರ ಕುಲಕರ್ಣಿ, ದಸ್ತಗಿರಿಅಲಿ, ಬಸಪ್ಪ ಗಾಳಿ, ರಾಜಶೇಖರ ಹೊಸಮನಿ, ಗವಿಸಿದ್ದಯ್ಯ ಎಸ್. ಹಿರೇಮಠ ಹಾಗೂ ಶ್ರೀಪಾದರಾವ್ ದೇಸಪಾಂಡೆ ಇವರುಗಳು ಉಪಸ್ಥಿತರಿದ್ದರು.

Advertisement

0 comments:

Post a Comment

 
Top