ಕೊಪ್ಪಳ ಅ. ೩೦ (ಕ ವಾ) ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯು ಪ್ರಸಕ್ತ ಸಾಲಿನ ರಾಜ್ಯ ಮಟ್ಟದ ರಾಜೀವ್‌ಗಾಂಧಿ ಖೇಲ್‌ಅಭಿಯಾನ್(ಗ್ರಾಮೀಣ) ಕ್ರೀಡಾಕೂಟದ ಗುಂಪು-೧ ರಲ್ಲಿ ಅಥ್ಲೆಟಿಕ್ಸ್, ವಾಲಿಬಾಲ್ ಮತ್ತು ಷಟಲ್ ಬ್ಯಾಡ್ಮಿಂಟನ್ ಕ್ರೀಡೆಗಳಿಗೆ ಕೊಪ್ಪಳ ಜಿಲ್ಲೆಯಿಂದ ೬೬ ಕ್ರೀಡಾಪಟುಗಳು ಆಯ್ಕೆಯಾಗಿದ್ದಾರೆ.
ಇತ್ತೀಚೆಗೆ ಜಿಲ್ಲಾ ಕ್ರೀಡಾಂಗಣದಲ್ಲಿ ಜರುಗಿದ ಜಿಲ್ಲಾ ಮಟ್ಟದ ರಾಜೀವ್
ಗಾಂಧಿ ಖೇಲ್‌ಅಭಿಯಾನ್ (ಗ್ರಾಮೀಣ) ಕ್ರೀಡಾಕೂಟಗಳಲ್ಲಿ ವೈಯಕ್ತಿಕ ಮತ್ತು ಗುಂಪು ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದ ಜಿಲ್ಲೆಯ ನಾಲ್ಕು ತಾಲೂಕಿನ ಕ್ರೀಡಾಪಟುಗಳು ಉಡುಪಿಯಲ್ಲಿ ಜರುಗುವ ಈ ರಾಜ್ಯ ಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆಯಾಗಿದ್ದು, ಒಟ್ಟು ೪ ಗುಂಪುಗಳಲ್ಲಿ ಜರುಗುವ ರಾಜ್ಯ ಮಟ್ಟದ ಕ್ರೀಡಾಕೂಟಗಳಲ್ಲಿ ೧ನೇ ಗುಂಪು ಸ್ಪರ್ಧೆಗೆ ಆಯ್ಕೆಯಾದ ಕ್ರೀಡಾಪಟುಗಳಿಗೆ ಇಲಾಖೆಯಿಂದ ಟ್ರ್ಯಾಕ್‌ಸ್ಯೂಟ್‌ನ್ನು ವಿತರಿಸಲಾಗಿದೆ. ಜಿಲ್ಲಾ ಪಂಚಾಯತ್ ಅಧ್ಯಕ್ಷ ಅಮರೇಶ ಕುಳಗಿಯವರು ಕ್ರೀಡಾಪಟುಗಳಿಗೆ ಟ್ರ್ಯಾಕ್‌ಸ್ಯೂಟ್ ವಿತರಿಸಿ ರಾಜ್ಯಮಟ್ಟದಲ್ಲಿ ಉತ್ತಮ ಸಾಧನೆ ಮಾಡಿ ಜಿಲ್ಲೆಗೆ ಕೀರ್ತಿ ತರಬೇಕೆಂದು ಶುಭ ಕೋರಿದರು. ಈ ಸಂದರ್ಭದಲ್ಲಿ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕಿ ಡಾ.ಶಾರದಾ ನಿಂಬರಗಿ, ದ್ವಿ.ದ.ಸ. ಕೆ.ಎಂ.ಪಾಟೀಲ್ ಸೇರಿದಂತೆ ಕಛೇರಿ ಸಿಬ್ಬಂದಿ ಪಾಲ್ಗೊಂಡಿದ್ದರು. ಇತ್ತೀಚೆಗೆ ಜಿಲ್ಲಾ ಕ್ರೀಡಾಂಗಣದಲ್ಲಿ ಜರುಗಿದ ಜಿಲ್ಲಾ ಮಟ್ಟದ ರಾಜೀವ್
0 comments:
Post a Comment
Click to see the code!
To insert emoticon you must added at least one space before the code.