PLEASE LOGIN TO KANNADANET.COM FOR REGULAR NEWS-UPDATES

ಕೊಪ್ಪಳ-೦೬- ಉಪನ್ಯಾಸಕರು ಹೊಸ ಹೊಸ ವಿಷಯಗಳಿಗೆ ತಕ್ಕಂತೆ ಪುನಶ್ಚೇತನಗೊಳ್ಳುವುದು ಅಗತ್ಯವಾಗಿದೆ ಎಂದು ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕರಾದ ಟಿ.ಶಿವಮೂರ್ತಿರವರು ನುಡಿದರು. ಅವರು ಪದವಿ ಪೂರ್ವ ಶಿಕ್ಷಣ ಇಲಾಖೆ, ಕೊಪ್ಪಳ ಮತ್ತು ಶ್ರೀ ಗವಿಸಿದ್ಧೇಶ್ವರ ಪದವಿ ಪೂರ್ವ ಮಹಾವಿದ್ಯಾಲಯ, ಕೊಪ್ಪಳ ಇವರ ಆಶ್ರಯದಲ್ಲಿ ನಡೆದ ರಾಯಚೂರು, ಬಳ್ಳಾರಿ ಮತ್ತು ಕೊಪ್ಪಳ ಜಿಲ್ಲೆಗಳ ಕನ್ನಡ ಹಾಗೂ ಇತಿಹಾಸ ವಿಷಯಗಳ ೦೩ ದಿನಗಳ ತರಬೇತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಮುಂದುವರೆದು ಈ ದಿನ ಜಗತ್ತು ಬ
ದಲಾವಣೆಯತ್ತ ಸಾಗುತ್ತಿದೆ. ಶಿಕ್ಷಕರು ಸಹ ಬದಲಾವಣೆಗೆ ತಕ್ಕಂತೆ ಮಕ್ಕಳಿಗೆ ಬೋಧನಾ ಶೈಲಿಯನ್ನು ರೂಢಿಸಿಕೊಂಡು ಮಕ್ಕಳಿಗೆ ಬೋಧಿಸುವುದು ಇಂದಿನ ದಿನಮಾನಗಳಲ್ಲಿ ಅಗತ್ಯವಾಗಿದೆ ಎಂದರು. ಕಾರ್ಯಕ್ರಮದಲ್ಲಿ ಕೊಪ್ಪಳ ಜಿಲ್ಲಾ ಪದವಿ ಪೂರ್ವ ಕಾಲೇಜುಗಳ ಪ್ರಾಚಾರ್ಯರ ಸಂಘದ ಅಧ್ಯಕ್ಷರಾದ ಶ್ರೀ ಎ.ಜಿ ಶರಣಪ್ಪ, ಇತಿಹಾಸ ವಿಷಯದ ಸಂಪನ್ಮೂಲ ವ್ಯಕ್ತಿಗಳಾದ ಡಾ.ಎಂ.ಕೆ ದುರುಗಪ್ಪ ಮಾಳೆ, ಕನ್ನಡ ವಿಷಯದ ಸಂಪನ್ಮೂಲ ವ್ಯಕ್ತಿಗಳಾದ ಡಾ.ಎಸ್.ಎಸ್ ಪೋರೆ ವೇದಿಕೆ ಮೇಲೆ ಉಪಸ್ಥಿತರಿದ್ದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶ್ರೀ ಗವಿಸಿದ್ಧೇಶ್ವರ ಪದವಿ ಪೂರ್ವ ಮಹಾವಿದ್ಯಾಲಯದ ಪ್ರಾಚಾರ್ಯರಾದ  ಪರೀಕ್ಷಿತರಾಜರವರು ವಹಿಸಿಕೊಂಡಿದ್ದರು. ಉಪನ್ಯಾಸಕರಾದ ಶ್ರೀ ಶಂಕರ ಮಾಳೇಕೊಪ್ಪ ಇವರ ಪ್ರಾರ್ಥನೆಯೊಂದಿಗೆ ಪ್ರಾರಂಭವಾದ ಈ ಕಾರ್ಯಕ್ರಮಕ್ಕೆ ಉಪನ್ಯಾಸಕರಾದ ಡಾ.ಸಿದ್ದಲಿಂಗಪ್ಪ ಕೊಟ್ನೆಕಲ್ ಸ್ವಾಗತಿಸಿದರೆ, ಕೊನೆಗೆ ಉಪನ್ಯಾಸಕರಾದ ಡಾ.ವೀರೇಶಕುಮಾರ ವಂದಿಸಿದರು. ಕಾರ್ಯಕ್ರಮ ನಿರೂಪಣೆಯನ್ನು ಉಪನ್ಯಾಸಕರಾದ ಶ್ರೀ ಬಿ.ಎನ್ ತಳವಾರ ನೆರೆವೇರಿಸಿದರು. ಈ ಕಾರ್ಯಕ್ರಮದಲ್ಲಿ ಕೊಪ್ಪಳ, ಬಳ್ಳಾರಿ ಮತ್ತು ರಾಯಚೂರು ಜಿಲ್ಲೆಗಳ ಕನ್ನಡ ಹಾಗೂ ಇತಿಹಾಸ ವಿಷಯಗಳ ಸುಮಾರು ೨೦೦ಕ್ಕೂ ಅಧಿಕ ಉಪನ್ಯಾಸಕರು ಭಾಗವಹಿಸಿದ್ದರು.

Advertisement

0 comments:

Post a Comment

 
Top