ಕೊಪ್ಪಳ ನ. ೨೦ (ಕ ವಾ) ಕೊಪ್ಪಳ ನೂತನ ಜಿಲ್ಲಾಧಿಕಾರಿಯಾಗಿ ಎಂ. ಕನಗವಲ್ಲಿ ಅವರು ಶುಕ್ರವಾರದಂದು ಅಧಿಕಾರ ವಹಿಸಿಕೊಂಡರು.
ಈ ಮೊದಲು ಕೊಪ್ಪಳ ಜಿಲ್ಲಾಧಿಕಾರಿಯಾಗಿದ್ದ ರಮಣದೀಪ್ ಚೌಧರಿ ಅವರು ಹಾವೇರಿ ಜಿಲ್ಲೆಗೆ ವರ್ಗಾವಣೆಯಾದ ಪ್ರಯುಕ್ತ ಡಿಸಿ ಹುದ್ದೆ ತೆರವಾಗಿತ್ತು. ಅಪರ ಜಿಲ್ಲಾಧಿಕಾರಿ ಡಾ. ಪ್ರವೀಣಕುಮಾರ್ ಜಿ.ಎಲ್. ಅವರು ಪ್ರಭಾರಿ ಜಿಲ್ಲಾಧಿಕಾರಿಯಾಗಿ ಕಾರ್ಯ ನಿರ್ವಹಿಸುತ್ತಿದ್ದರು. ಉಡುಪಿ ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯ
ನಿರ್ವಾಹಕರಾಗಿ ಕಾರ್ಯ ನಿರ್ವಹಿಸುತ್ತಿದ್ದ ಎಂ. ಕನಗವಲ್ಲಿ ಅವರನ್ನು ಕೊಪ್ಪಳ ಜಿಲ್ಲಾಧಿಕಾರಿ ಹುದ್ದೆಗೆ ವರ್ಗಾವಣೆಗೊಳಿಸಿ ಸರ್ಕಾರ ಇತ್ತೀಚೆಗೆ ಆದೇಶ ಹೊರಡಿಸಿತ್ತು. ಎಂ. ಕನಗವಲ್ಲಿ ಅವರು ನೂತನ ಜಿಲ್ಲಾಧಿಕಾರಿಯಾಗಿ ಶುಕ್ರವಾರ ಅಧಿಕಾರ ವಹಿಸಿಕೊಂಡರು. ಎಂ. ಕನಗವಲ್ಲಿ ಅವರು ಮೂಲತಃ ತಮಿಳುನಾಡು ರಾಜ್ಯದವರಾಗಿದ್ದು, ಅಗ್ರಿಕಲ್ಚರ್ ಇಂಜಿನಿಯರಿಂಗ್‌ನಲ್ಲಿ ಪದವಿ ಪಡೆದಿದ್ದು, ೨೦೦೭ ರ ಬ್ಯಾಚ್‌ನಲ್ಲಿ ೧೫ ನೇ ರ್‍ಯಾಂಕಿಂಗ್ ಪಡೆದು ಐಎಎಸ್ ಅಧಿಕಾರಿಯಾಗಿ ಆಯ್ಕೆಯಾದವರು. ಮಂಡ್ಯ ಜಿಲ್ಲೆಯಲ್ಲಿ ಪ್ರೊಬೆಷನರಿ ಅಧಿಕಾರಿಯಾಗಿ ತರಬೇತಿ ಪಡೆದು, ೨೦೧೩ ರಲ್ಲಿ ಬೀದರ್ ಜಿಲ್ಲೆ ಉಪವಿಭಾಗಾಧಿಕಾರಿಯಾಗಿ ಒಂದು ವರ್ಷ ಸೇವೆ ಸಲ್ಲಿಸಿದ್ದಾರೆ. ನಂತರ ೨೦೧೪ ರ ಜನವರಿಯಿಂದ ೨೦೧೫ ರ ನವೆಂಬರ್ ೧೮ ರವರೆಗೆ ಉಡುಪಿ ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಯಾಗಿ ಸೇವೆ ಸಲ್ಲಿಸಿದ್ದಾರೆ. ಈ ಮೊದಲು ಕೊಪ್ಪಳ ಜಿಲ್ಲಾಧಿಕಾರಿಯಾಗಿದ್ದ ರಮಣದೀಪ್ ಚೌಧರಿ ಅವರು ಹಾವೇರಿ ಜಿಲ್ಲೆಗೆ ವರ್ಗಾವಣೆಯಾದ ಪ್ರಯುಕ್ತ ಡಿಸಿ ಹುದ್ದೆ ತೆರವಾಗಿತ್ತು. ಅಪರ ಜಿಲ್ಲಾಧಿಕಾರಿ ಡಾ. ಪ್ರವೀಣಕುಮಾರ್ ಜಿ.ಎಲ್. ಅವರು ಪ್ರಭಾರಿ ಜಿಲ್ಲಾಧಿಕಾರಿಯಾಗಿ ಕಾರ್ಯ ನಿರ್ವಹಿಸುತ್ತಿದ್ದರು. ಉಡುಪಿ ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯ
0 comments:
Post a Comment