ಕೊಪ್ಪಳ
ನ. ೦೪ (ಕ ವಾ):ಜಿಲ್ಲೆಯ ಗ್ರಾಮೀಣ ಕುಡಿಯುವ ನೀರು ಸರಬರಾಜು ಯೋಜನೆಗಳ
ಹಲವಾರು ಕಾಮಗಾರಿಗಳಿಗೆ ಸರ್ಕಾರದಿಂದ ಅನುದಾನ ಬಿಡುಗಡೆಯಾಗಿದ್ದರೂ, ಅಧಿಕಾರಿಗಳ
ನಿಷ್ಕಾಲಜಿ ವರ್ತನೆಯಿಂದ ಕಾಮಗಾರಿಗಳು ಪ್ರಾರಂಭವಾಗುತ್ತಿಲ್ಲ. ಕೂಡಲೆ ಹೊಸ
ಕಾಮಗಾರಿಗಳನ್ನು ಪ್ರಾರಂಭಿಸಲು ಅಗತ್ಯ ಕ್ರಮ ಜರುಗಿಸುವಂತೆ ಜಿಲ್ಲಾ ಪಂಚಾಯತಿ ಅಧ್ಯಕ್ಷ
ಅಮರೇಶ್ ಕುಳಗಿ ಅವರು ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.
ಜಿಲ್ಲಾ ಪಂಚಾಯತಿ ಸಭಾಂಗಣದಲ್ಲಿ ಬುಧವಾರದಂದು ಏರ್ಪಡಿಸಲಾಗಿದ್ದ ಜಿಲ್ಲಾ ಪಂಚಾಯತಿ ಸಾಮಾನ್ಯ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಜಿಲ್ಲೆಯಲ್ಲಿ ೨೦೧೫-೧೬ ನೇ ಸಾಲಿನ ಗ್ರಾಮೀಣ ಕುಡಿಯುವ ನೀರು ಸರಬರಾಜು ಕಾಮಗಾರಿಗಳಿಗಾಗಿ ೮೬. ೩೮ ಕೋಟಿ ರೂ.ಗಳ ಕ್ರಿಯಾ ಯೋಜನೆ ತಯಾರಿಸಲಾಗಿದ್ದು, ಈ ಪೈಕಿ ಮುಂದುವರೆದ ೭೭೮ ಕಾಮಗಾರಿಗಳಿಗೆ ೫೧. ೫೮ ಹಾಗೂ ಹೊಸ ೧೧೬೧ ಕಾಮಗರಿಗಳಿಗೆ ೩೪. ೮೦ ಕೋಟಿ ರೂ. ನಿಗದಿಪಡಿಸಲಾಗಿದೆ. ಈಗಾಗಲೆ ವರ್ಷದ ೦೭ ತಿಂಗಳು ಕಳೆದಿದ್ದರೂ, ಇನ್ನೂ ಅನುಮೋದನೆಯ ಹಂತದಲ್ಲಿದೆ. ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಅಧಿಕಾರಿಗಳ ಬೇಜವಾಬ್ದಾರಿಯುತ ನಿಲುವಿನಿಂದಾಗಿ, ಕುಡಿಯುವ ನೀರು ಸರಬರಾಜು ಕಾಮಗಾರಿಗಳು ಪ್ರಾರಂಭವಾಗುತ್ತಿಲ್ಲ. ಇನ್ನು ಮುಂದುವರೆದ ಕಾಮಗಾರಿಗಳ ಪೈಕಿ ಗುತ್ತಿಗೆದಾರರ ನಿಷ್ಕಾಳಜಿಯಿಂದಾಗಿ ಕಾಮಗಾರಿಗಳು ಪೂರ್ಣವಾಗುತ್ತಿಲ್ಲ. ಅಂತಹ ಗುತ್ತಿಗೆದಾರರಿಗೆ ಕನಿಷ್ಟ ಪಕ್ಷ ನೋಟೀಸ್ ನೀಡುವ ಕಾರ್ಯವನ್ನೂ ಸಹ ಅಧಿಕಾರಿಗಳು ಕೈಗೊಳ್ಳುತ್ತಿಲ್ಲ ಎಂದು ಹಲವು ಜಿ.ಪಂ. ಸದಸ್ಯರು ಅಸಮಾಧಾನ ವ್ಯಕ್ತಪಡಿಸಿದರು. ಇದಕ್ಕೆ ಪ್ರತಿಕ್ರಿಯಿಸಿದ ಜಿ.ಪಂ. ಅಮರೇಶ್ ಕುಳಗಿ ಅವರು, ಜಿಲ್ಲೆಯಲ್ಲಿ ಈ ವರ್ಷ ಮಳೆಯ ಕೊರತೆಯಿಂದ ಬರ ಪರಿಸ್ಥಿತಿ ತಲೆದೋರಿದೆ. ಬೇಸಿಗೆಯ ಅವಧಿಯಲ್ಲಿ ಗ್ರಾಮೀಣ ಪ್ರದೇಶಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ತಲೆದೋರುವ ಸಾಧ್ಯತೆಗಳಿವೆ. ಇದುವರೆಗೂ ಕುಡಿಯುವ ನೀರಿನ ಯಾವುದೇ ಹೊಸ ಕಾಮಗಾರಿಗಳನ್ನು ಪ್ರಾರಂಭಿಸಿಲ್ಲದಿರುವುದು, ಜನಪ್ರತಿನಿಧಿಗಳು ಸಾರ್ವಜನಿಕರಿಗೆ ಉತ್ತರ ನೀಡದ ಪರಿಸ್ಥಿತಿ ನಿರ್ಮಾಣವಾಗಿದೆ. ಇನ್ನಾದರೂ ಅಧಿಕಾರಿಗಳು ಎಚ್ಚೆತ್ತುಕೊಂಡು, ಬೇಸಿಗೆಯಲ್ಲಿ ನೀರಿನ ತೊಂದರೆ ಆಗದಂತೆ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವತ್ತ ಗಮನ ಹರಿಸಬೇಕು ಎಂದು ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಕಾರ್ಯಪಾಲಕ ಅಭಿಯಂತರ ಮಲ್ಲಪ್ಪ ಅವರಿಗೆ ಸೂಚನೆ ನೀಡಿದರು.
ಶಾಲೆಗಳಲ್ಲಿ ದೂರು ಪೆಟ್ಟಿಗೆ ಇಡಿ- ಯಲಬುರ್ಗಾ ತಾಲೂಕು ಸಂಗನಾಳ ಗ್ರಾಮದ ಸರ್ಕಾರಿ ಶಾಲೆಯ ಶಿಕ್ಷಕ ಅಂದಪ್ಪ ನಿಂಗೋಜಿ ಅವರು ಅದೇ ಶಾಲೆಯ ಅಪ್ರಾಪ್ತ ವಿದ್ಯಾರ್ಥಿನಿ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೆ ಶಿಕ್ಷಕನನ್ನು ಅಮಾನತುಗೊಳಿಸಲಾಗಿದೆ ಎಂದು ಡಿಡಿಪಿಐ ಶ್ಯಾಮಸುಂದರ್ ಸಭೆಗೆ ಮಾಹಿತಿ ನೀಡಿದರು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಷಯ ತಿಳಿದ ಕೂಡಲೆ ಅಗತ್ಯ ಕ್ರಮ ಕೈಗೊಳ್ಳದ ಕ್ಷೇತ್ರ ಶಿಕ್ಷಣಾಧಿಕಾರಿಗಳ ವಿರುದ್ಧ ಶಿಸ್ತು ಕ್ರಮ ಜರುಗಿಸಬೇಕು ಎಂದು ಜಿ.ಪಂ. ಕೆಲ ಸದಸ್ಯರು ಒತ್ತಾಯಿಸಿದರು. ಅಲ್ಲದೆ ಶಾಲೆಗಳಲ್ಲಿ ದೂರು ಪೆಟ್ಟಿಗೆಯೊಂದನ್ನು ಸ್ಥಾಪಿಸಬೇಕು ಎಂದು ಇಲಾಖೆ ನಿರ್ದೇಶನ ನೀಡಿದ್ದರೂ, ಜಿಲ್ಲೆಯ ಬಹುತೇಕ ಶಾಲೆಗಳಲ್ಲಿ ದೂರು ಪೆಟ್ಟಿಗೆಯನ್ನು ಸ್ಥಾಪಿಸಿಲ್ಲ ಎಂದು ಸದಸ್ಯರು ಸಭೆಯ ಗಮನಕ್ಕೆ ತಂದರು. ಎಲ್ಲ ಶಾಲೆಗಳಲ್ಲೂ ಕೂಡಲೆ ದೂರು ಪೆಟ್ಟಿಗೆಯನ್ನು ಸ್ಥಾಪಿಸಬೇಕು. ಅಲ್ಲದೆ ಶಿಕ್ಷಣ ಇಲಾಖೆ ಅಧಿಕಾರಿಗಳು ನಿಯಮಿತವಾಗಿ ಶಾಲೆಗಳಿಗೆ ಭೇಟಿ ಕೊಟ್ಟು, ಅಲ್ಲಿನ ಸಮಸ್ಯೆಗಳ ಬಗ್ಗೆ ವಿದ್ಯಾರ್ಥಿಗಳೊಂದಿಗೆ ಸಮಾಲೋಚನೆ ನಡೆಸಬೇಕು ಎಂದು ಜಿ.ಪಂ. ಅಧ್ಯಕ್ಷರು ಸೂಚನೆ ನೀಡಿದರು.
ಹಿಂಗಾರು ಬಿತ್ತನೆ- ಜಿಲ್ಲೆಯಲ್ಲಿ ಮುಂಗಾರು ಮಳೆಯ ಕೊರತೆಯಿಂದಾಗಿ ಮುಂಗಾರು ಹಂಗಾಮಿನಲ್ಲಿ ಬಿತ್ತನೆಯಾದ ಕ್ಷೇತ್ರದ ಪೈಕಿ ೧. ೨೭ ಲಕ್ಷ ಹೆ. ಬೆಳೆ ನಷ್ಟವಾಗಿದ್ದು, ಇಲಾಖೆ ಕೈಗೊಂಡ ಸಮೀಕ್ಷೆಯ ಪ್ರಕಾರ ೧. ೫೧ ಲಕ್ಷ ರೈತರು ಬೆಳೆ ಹಾನಿ ಅನುಭವಿಸಿದ್ದಾರೆ. ೧. ೫೫ ಲಕ್ಷ ಹೆ. ಹಿಂಗಾರು ಬಿತ್ತನೆಯ ಗುರಿಯ ಬದಲಿಗೆ ೧. ೬೨ ಲಕ್ಷ ಹೆ. ನಷ್ಟು ಬಿತ್ತನೆಯಾಗಿದೆ. ಇದರಲ್ಲಿ ಕಡಲೆ ಬೆಳೆ ೮೨ ಸಾವಿರ ಹೆ. ನಷ್ಟು ಬಿತ್ತನೆಯಾಗಿದೆ. ಜಿಲ್ಲೆಯಲ್ಲಿ ಕಡಲೆ ಮತ್ತು ಸೂರ್ಯಕಾಂತಿ ಬೆಳೆಗೆ ಕೀಟ ಬಾಧೆ ಕಂಡುಬಂದಿದ್ದು, ಈಗಾಗಲೆ ಕೃಷಿ ಮತ್ತು ಕೀಟ ತಜ್ಞ ಅಧಿಕಾರಿಗಳೊಂದಿಗೆ ಹೊಲಗಳಿ
ಗ್ರಾಮಗಳಲ್ಲಿ ಗೋದಾಮು- ಸಭೆಯಲ್ಲಿ ಉಪಸ್ಥಿತರಿದ್ದ ಜಿ.ಪಂ. ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಕೃಷ್ಣ ಉದಪುಡಿ ಅವರು ಮಾತನಾಡಿ, ಗ್ರಾಮೀಣ ಪ್ರದೇಶಗಳಲ್ಲಿ ರೈತರು ಆಹಾರ ಧಾನ್ಯ ಶೇಖರಿಸಿಡಲು ಅನುಕೂಲವಾಗುವಂತೆ ಗೋದಾಮುಗಳನ್ನು ನಿರ್ಮಿಸಲು ಉದ್ಯೋಗಖಾತ್ರಿ ಯೋಜನೆಯಡಿ ಪ್ರತಿ ಗ್ರಾಮ ಪಂಚಾಯತಿಗೆ ೧೫ ಲಕ್ಷ ರೂ. ಅನುದಾನ ಒದಗಿಸಲು ಅವಕಾಶವಿದೆ. ಈ ಅನುದಾನದ ಜೊತೆಗೆ ಇತರೆ ಯೋಜನೆಗಳ ಅನುದಾನವನ್ನು ಬಳಸಿಕೊಂಡು, ಉತ್ತಮ ಗುಣಮಟ್ಟದ ಗೋದಾಮು ನಿರ್ಮಾಣಕ್ಕೆ ಗ್ರಾಮ ಪಂಚಾಯತಿಗಳು ಮುಂದಾಗಬೇಕು ಎಂದು ಸಲಹೆ ನೀಡಿದರು.
ಜಿ.ಪಂ. ಸದಸ್ಯರುಗಳಾದ ಅರವಿಂದಗೌಡ ಪಾಟೀಲ್, ಪರಸಪ್ಪ ಕತ್ತಿ, ವೀರೇಶ್ ಸಾಲೋಣಿ ವೇದಿಕೆ ಮೇಲೆ ಉಪಸ್ಥಿತರಿದ್ದರು. ಜಿ.ಪಂ. ಉಪಕಾರ್ಯದರ್ಶಿ ಎನ್.ಕೆ. ತೊರವಿ, ಯೋಜನಾ ನಿರ್ದೇಶಕ ರವಿ ಬಸರಿಹಳ್ಳಿ ಸೇರಿದಂತೆ ಜಿಲ್ಲಾ ಪಂಚಾಯತಿ ಹಲವು ಸದಸ್ಯರುಗಳು, ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು ಸಭೆಯಲ್ಲಿ ಉಪಸ್ಥಿತರಿದ್ದರು.
ಗೆ ಭೇಟಿ
ನೀಡಿ ಪರಿಶೀಲನೆ ನಡೆಸಿ, ಕೀಟ ಬಾಧೆ ನಿರ್ವಹಣೆಗೆ ರೈತರು ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ
ವ್ಯಾಪಕ ಪ್ರಚಾರ ಕೈಗೊಳ್ಳಲಾಗಿದೆ. ಸದ್ಯ ಜಿಲ್ಲೆಯಲ್ಲಿ ಮಳೆಯ ಅಗತ್ಯವಿದ್ದು,
ವಾರದೊಳಗೆ ಮಳೆಯಾಗುವ ನಿರೀಕ್ಷೆ ಇದೆ ಎಂದು ಜಂಟಿಕೃಷಿ ನಿರ್ದೇಶಕ ರಾಮದಾಸ್ ಸಭೆಗೆ
ಮಾಹಿತಿ ನೀಡಿದರು. ಬೆಳೆಗಳಿಗೆ ತಗುಲಿರುವ ಕೀಟಬಾಧೆ ನಿವಾರಣೆಗೆ ರೈತರಿಗೆ ಸಲಹೆಗಳನ್ನು
ಸಮರ್ಪಕವಾಗಿ ತಲುಪುವಂತೆ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವಂತೆ ಜಿ.ಪಂ. ಅಧ್ಯಕ್ಷರು
ಸೂಚನೆ ನೀಡಿದರು.ಜಿಲ್ಲಾ ಪಂಚಾಯತಿ ಸಭಾಂಗಣದಲ್ಲಿ ಬುಧವಾರದಂದು ಏರ್ಪಡಿಸಲಾಗಿದ್ದ ಜಿಲ್ಲಾ ಪಂಚಾಯತಿ ಸಾಮಾನ್ಯ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಜಿಲ್ಲೆಯಲ್ಲಿ ೨೦೧೫-೧೬ ನೇ ಸಾಲಿನ ಗ್ರಾಮೀಣ ಕುಡಿಯುವ ನೀರು ಸರಬರಾಜು ಕಾಮಗಾರಿಗಳಿಗಾಗಿ ೮೬. ೩೮ ಕೋಟಿ ರೂ.ಗಳ ಕ್ರಿಯಾ ಯೋಜನೆ ತಯಾರಿಸಲಾಗಿದ್ದು, ಈ ಪೈಕಿ ಮುಂದುವರೆದ ೭೭೮ ಕಾಮಗಾರಿಗಳಿಗೆ ೫೧. ೫೮ ಹಾಗೂ ಹೊಸ ೧೧೬೧ ಕಾಮಗರಿಗಳಿಗೆ ೩೪. ೮೦ ಕೋಟಿ ರೂ. ನಿಗದಿಪಡಿಸಲಾಗಿದೆ. ಈಗಾಗಲೆ ವರ್ಷದ ೦೭ ತಿಂಗಳು ಕಳೆದಿದ್ದರೂ, ಇನ್ನೂ ಅನುಮೋದನೆಯ ಹಂತದಲ್ಲಿದೆ. ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಅಧಿಕಾರಿಗಳ ಬೇಜವಾಬ್ದಾರಿಯುತ ನಿಲುವಿನಿಂದಾಗಿ, ಕುಡಿಯುವ ನೀರು ಸರಬರಾಜು ಕಾಮಗಾರಿಗಳು ಪ್ರಾರಂಭವಾಗುತ್ತಿಲ್ಲ. ಇನ್ನು ಮುಂದುವರೆದ ಕಾಮಗಾರಿಗಳ ಪೈಕಿ ಗುತ್ತಿಗೆದಾರರ ನಿಷ್ಕಾಳಜಿಯಿಂದಾಗಿ ಕಾಮಗಾರಿಗಳು ಪೂರ್ಣವಾಗುತ್ತಿಲ್ಲ. ಅಂತಹ ಗುತ್ತಿಗೆದಾರರಿಗೆ ಕನಿಷ್ಟ ಪಕ್ಷ ನೋಟೀಸ್ ನೀಡುವ ಕಾರ್ಯವನ್ನೂ ಸಹ ಅಧಿಕಾರಿಗಳು ಕೈಗೊಳ್ಳುತ್ತಿಲ್ಲ ಎಂದು ಹಲವು ಜಿ.ಪಂ. ಸದಸ್ಯರು ಅಸಮಾಧಾನ ವ್ಯಕ್ತಪಡಿಸಿದರು. ಇದಕ್ಕೆ ಪ್ರತಿಕ್ರಿಯಿಸಿದ ಜಿ.ಪಂ. ಅಮರೇಶ್ ಕುಳಗಿ ಅವರು, ಜಿಲ್ಲೆಯಲ್ಲಿ ಈ ವರ್ಷ ಮಳೆಯ ಕೊರತೆಯಿಂದ ಬರ ಪರಿಸ್ಥಿತಿ ತಲೆದೋರಿದೆ. ಬೇಸಿಗೆಯ ಅವಧಿಯಲ್ಲಿ ಗ್ರಾಮೀಣ ಪ್ರದೇಶಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ತಲೆದೋರುವ ಸಾಧ್ಯತೆಗಳಿವೆ. ಇದುವರೆಗೂ ಕುಡಿಯುವ ನೀರಿನ ಯಾವುದೇ ಹೊಸ ಕಾಮಗಾರಿಗಳನ್ನು ಪ್ರಾರಂಭಿಸಿಲ್ಲದಿರುವುದು, ಜನಪ್ರತಿನಿಧಿಗಳು ಸಾರ್ವಜನಿಕರಿಗೆ ಉತ್ತರ ನೀಡದ ಪರಿಸ್ಥಿತಿ ನಿರ್ಮಾಣವಾಗಿದೆ. ಇನ್ನಾದರೂ ಅಧಿಕಾರಿಗಳು ಎಚ್ಚೆತ್ತುಕೊಂಡು, ಬೇಸಿಗೆಯಲ್ಲಿ ನೀರಿನ ತೊಂದರೆ ಆಗದಂತೆ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವತ್ತ ಗಮನ ಹರಿಸಬೇಕು ಎಂದು ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಕಾರ್ಯಪಾಲಕ ಅಭಿಯಂತರ ಮಲ್ಲಪ್ಪ ಅವರಿಗೆ ಸೂಚನೆ ನೀಡಿದರು.
ಶಾಲೆಗಳಲ್ಲಿ ದೂರು ಪೆಟ್ಟಿಗೆ ಇಡಿ- ಯಲಬುರ್ಗಾ ತಾಲೂಕು ಸಂಗನಾಳ ಗ್ರಾಮದ ಸರ್ಕಾರಿ ಶಾಲೆಯ ಶಿಕ್ಷಕ ಅಂದಪ್ಪ ನಿಂಗೋಜಿ ಅವರು ಅದೇ ಶಾಲೆಯ ಅಪ್ರಾಪ್ತ ವಿದ್ಯಾರ್ಥಿನಿ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೆ ಶಿಕ್ಷಕನನ್ನು ಅಮಾನತುಗೊಳಿಸಲಾಗಿದೆ ಎಂದು ಡಿಡಿಪಿಐ ಶ್ಯಾಮಸುಂದರ್ ಸಭೆಗೆ ಮಾಹಿತಿ ನೀಡಿದರು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಷಯ ತಿಳಿದ ಕೂಡಲೆ ಅಗತ್ಯ ಕ್ರಮ ಕೈಗೊಳ್ಳದ ಕ್ಷೇತ್ರ ಶಿಕ್ಷಣಾಧಿಕಾರಿಗಳ ವಿರುದ್ಧ ಶಿಸ್ತು ಕ್ರಮ ಜರುಗಿಸಬೇಕು ಎಂದು ಜಿ.ಪಂ. ಕೆಲ ಸದಸ್ಯರು ಒತ್ತಾಯಿಸಿದರು. ಅಲ್ಲದೆ ಶಾಲೆಗಳಲ್ಲಿ ದೂರು ಪೆಟ್ಟಿಗೆಯೊಂದನ್ನು ಸ್ಥಾಪಿಸಬೇಕು ಎಂದು ಇಲಾಖೆ ನಿರ್ದೇಶನ ನೀಡಿದ್ದರೂ, ಜಿಲ್ಲೆಯ ಬಹುತೇಕ ಶಾಲೆಗಳಲ್ಲಿ ದೂರು ಪೆಟ್ಟಿಗೆಯನ್ನು ಸ್ಥಾಪಿಸಿಲ್ಲ ಎಂದು ಸದಸ್ಯರು ಸಭೆಯ ಗಮನಕ್ಕೆ ತಂದರು. ಎಲ್ಲ ಶಾಲೆಗಳಲ್ಲೂ ಕೂಡಲೆ ದೂರು ಪೆಟ್ಟಿಗೆಯನ್ನು ಸ್ಥಾಪಿಸಬೇಕು. ಅಲ್ಲದೆ ಶಿಕ್ಷಣ ಇಲಾಖೆ ಅಧಿಕಾರಿಗಳು ನಿಯಮಿತವಾಗಿ ಶಾಲೆಗಳಿಗೆ ಭೇಟಿ ಕೊಟ್ಟು, ಅಲ್ಲಿನ ಸಮಸ್ಯೆಗಳ ಬಗ್ಗೆ ವಿದ್ಯಾರ್ಥಿಗಳೊಂದಿಗೆ ಸಮಾಲೋಚನೆ ನಡೆಸಬೇಕು ಎಂದು ಜಿ.ಪಂ. ಅಧ್ಯಕ್ಷರು ಸೂಚನೆ ನೀಡಿದರು.
ಹಿಂಗಾರು ಬಿತ್ತನೆ- ಜಿಲ್ಲೆಯಲ್ಲಿ ಮುಂಗಾರು ಮಳೆಯ ಕೊರತೆಯಿಂದಾಗಿ ಮುಂಗಾರು ಹಂಗಾಮಿನಲ್ಲಿ ಬಿತ್ತನೆಯಾದ ಕ್ಷೇತ್ರದ ಪೈಕಿ ೧. ೨೭ ಲಕ್ಷ ಹೆ. ಬೆಳೆ ನಷ್ಟವಾಗಿದ್ದು, ಇಲಾಖೆ ಕೈಗೊಂಡ ಸಮೀಕ್ಷೆಯ ಪ್ರಕಾರ ೧. ೫೧ ಲಕ್ಷ ರೈತರು ಬೆಳೆ ಹಾನಿ ಅನುಭವಿಸಿದ್ದಾರೆ. ೧. ೫೫ ಲಕ್ಷ ಹೆ. ಹಿಂಗಾರು ಬಿತ್ತನೆಯ ಗುರಿಯ ಬದಲಿಗೆ ೧. ೬೨ ಲಕ್ಷ ಹೆ. ನಷ್ಟು ಬಿತ್ತನೆಯಾಗಿದೆ. ಇದರಲ್ಲಿ ಕಡಲೆ ಬೆಳೆ ೮೨ ಸಾವಿರ ಹೆ. ನಷ್ಟು ಬಿತ್ತನೆಯಾಗಿದೆ. ಜಿಲ್ಲೆಯಲ್ಲಿ ಕಡಲೆ ಮತ್ತು ಸೂರ್ಯಕಾಂತಿ ಬೆಳೆಗೆ ಕೀಟ ಬಾಧೆ ಕಂಡುಬಂದಿದ್ದು, ಈಗಾಗಲೆ ಕೃಷಿ ಮತ್ತು ಕೀಟ ತಜ್ಞ ಅಧಿಕಾರಿಗಳೊಂದಿಗೆ ಹೊಲಗಳಿ
ಗ್ರಾಮಗಳಲ್ಲಿ ಗೋದಾಮು- ಸಭೆಯಲ್ಲಿ ಉಪಸ್ಥಿತರಿದ್ದ ಜಿ.ಪಂ. ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಕೃಷ್ಣ ಉದಪುಡಿ ಅವರು ಮಾತನಾಡಿ, ಗ್ರಾಮೀಣ ಪ್ರದೇಶಗಳಲ್ಲಿ ರೈತರು ಆಹಾರ ಧಾನ್ಯ ಶೇಖರಿಸಿಡಲು ಅನುಕೂಲವಾಗುವಂತೆ ಗೋದಾಮುಗಳನ್ನು ನಿರ್ಮಿಸಲು ಉದ್ಯೋಗಖಾತ್ರಿ ಯೋಜನೆಯಡಿ ಪ್ರತಿ ಗ್ರಾಮ ಪಂಚಾಯತಿಗೆ ೧೫ ಲಕ್ಷ ರೂ. ಅನುದಾನ ಒದಗಿಸಲು ಅವಕಾಶವಿದೆ. ಈ ಅನುದಾನದ ಜೊತೆಗೆ ಇತರೆ ಯೋಜನೆಗಳ ಅನುದಾನವನ್ನು ಬಳಸಿಕೊಂಡು, ಉತ್ತಮ ಗುಣಮಟ್ಟದ ಗೋದಾಮು ನಿರ್ಮಾಣಕ್ಕೆ ಗ್ರಾಮ ಪಂಚಾಯತಿಗಳು ಮುಂದಾಗಬೇಕು ಎಂದು ಸಲಹೆ ನೀಡಿದರು.
ಜಿ.ಪಂ. ಸದಸ್ಯರುಗಳಾದ ಅರವಿಂದಗೌಡ ಪಾಟೀಲ್, ಪರಸಪ್ಪ ಕತ್ತಿ, ವೀರೇಶ್ ಸಾಲೋಣಿ ವೇದಿಕೆ ಮೇಲೆ ಉಪಸ್ಥಿತರಿದ್ದರು. ಜಿ.ಪಂ. ಉಪಕಾರ್ಯದರ್ಶಿ ಎನ್.ಕೆ. ತೊರವಿ, ಯೋಜನಾ ನಿರ್ದೇಶಕ ರವಿ ಬಸರಿಹಳ್ಳಿ ಸೇರಿದಂತೆ ಜಿಲ್ಲಾ ಪಂಚಾಯತಿ ಹಲವು ಸದಸ್ಯರುಗಳು, ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು ಸಭೆಯಲ್ಲಿ ಉಪಸ್ಥಿತರಿದ್ದರು.
0 comments:
Post a Comment