PLEASE LOGIN TO KANNADANET.COM FOR REGULAR NEWS-UPDATES

ಕೊಪ್ಪಳ, ನ. ೨೮ (ಕ ವಾ) ಯುವ ಜನತೆಯನ್ನು ಆಕರ್ಷಿಸುವ ವಾಲಿಬಾಲ್ ಕ್ರೀಡೆಯಲ್ಲಿ ಕ್ರೀಡಾಪಟುಗಲು ಉತ್ತಮ ಸಾಧನೆ ತೋರಿ, ಕರ್ನಾಟಕ ರಾಜ್ಯಕ್ಕೆ ಕೀರ್ತಿ ತರುವಂತಾಗಬೇಕು ಎಂದು ಜಿಲ್ಲಾಧಿಕಾರಿ ಎಂ. ಕನಗವಲ್ಲಿ ಅವರು ಆಶಯ ವ್ಯಕ್ತಪಡಿಸಿದರು.
    ಕೊಪ್ಪಳ ಜಿಲ್ಲಾ ಕ್ರೀಡಾಂಗಣದಲ್ಲಿ ಸಾರ್ವಜನಿಕ ಶಿಕ್ಷಣ ಇಲಾಖೆಯು ಯುವಜನ ಸೇವಾ ಮತ್ತು ಕ್ರೀಡಾ ಇಲಾಖೆಯ ಸಹಯೋಗದಲ್ಲಿ ಎರಡು ದಿನಗಳ ಕಾಲ ಆಯೋಜಿಸಿರುವ ರಾಜ್ಯ ಮಟ್ಟದ ಪ್ರಾಥಮಿಕ ಮತ್ತು ಪ್ರೌಢಶಾಲೆಗಳ ಬಾಲಕ/ಬಾಲಕಿಯರ ವಾಲಿಬಾಲ್ ಪಂದ್ಯಾವಳಿಯನ್ನು ಕ್ರೀಡಾ ಧ್ವಜಾರೋಹಣ ನೆರವೇರಿಸುವ ಮೂಲಕ ಚಾಲನೆ ನೀಡಿ ಮಾತನಾಡಿದರು.
    ಕೊಪ್ಪಳ ಜಿಲ್ಲೆಯಲ್ಲಿ ಇದೇ ಮೊದಲ ಬಾರಿಗೆ ರಾಜ್ಯ ಮಟ್ಟದ ವಾಲಿಬಾಲ್ ಪಂದ್ಯಾವಳಿ ಆಯೋಜನೆಯ ಹೊಣೆಗಾರಿಕೆಯನ್ನು ನೀಡಲಾಗಿದೆ.  ಕಾಲಾವಕಾಶ ಕಡಿಮೆ ಇದ್ದರೂ, ವ್ಯವಸ್ಥಿತ ರೀತಿಯಲ್ಲಿ ಪಂದ್ಯಾವಳಿ ಆಯೋಜಿಸಲು ಸಕಲ ವ್ಯವಸ್ಥೆ ಕೈಗೊಳ್ಳಲಾಗಿದೆ.  ಪಂದ್ಯಗಳು ಹೊನಲು ಬೆಳಕಿನಲ್ಲಿಯೂ ನಡೆಯಲು ಸೂಕ್ತ ವ್ಯವಸ್ಥೆ ಕೈಗೊಳ್ಳಲಾಗಿದೆ. ರಾಜ್ಯದ ವಿವಿಧ ಜಿಲ್ಲೆಗಳಿಂದ ಕ್ರೀಡಾಪಟುಗಳು ಕೊಪ್ಪಳಕ್ಕೆ ಆಗಮಿಸಿದ್ದು, ಸೂಕ್ತ ವಸತಿ, ಊಟೋಪಹಾರದ ವ್ಯವಸ್ಥೆ ಮಾಡಲಾಗಿದೆ.  ಕ್ರೀಡಾಪಟುಗಳು ವಾಲಿಬಾಲ್ ಪಂದ್ಯಾವಳಿಯಲ್ಲಿ ಉತ್ತಮ ಸಾಧನೆ ತೋರುವತ್ತ ತಮ್ಮ ಗಮನ ಕೇಂದ್ರೀಕರಿಸಬೇಕು.  ಉತ್ತಮ ಸಾಧನೆ ತೋರುವ ಮೂಲಕ ಮುಂದಿನ ದಿನಗಳಲ್ಲಿ ರಾಜ್ಯಕ್ಕೆ ಕೀರ್ತಿ
     ಅಪರ ಜಿಲ್ಲಾಧಿಕಾರಿ ಡಾ. ಪ್ರವೀಣಕುಮಾರ್ ಪವಾರ್, ಉಪವಿಭಾಗಾಧಿಕಾರಿ ಇಸ್ಮಾಯಿಲ್ ಸಾಹೇಬ್ ಶಿರಹಟ್ಟಿ, ನಗರಸಭೆ ಪೌರಾಯುಕ್ತ ರಮೇಶ್ ಪಟ್ಟೇದಾರ, ಸರ್ಕಾರಿ ನೌಕರರ ಸಂಘದ ಜಿಲ್ಲಾ ಅಧ್ಯಕ್ಷ ನಾಗರಾಜ ಜುಮ್ಮನ್ನವರ್, ಯುವಜನ ಸೇವೆ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕ ಶಾರದಾ ನಿಂಬರಗಿ, ಕ್ಷೇತ್ರ ಶಿಕ್ಷಣಾಧಿಕಾರಿ ಉಮೇಶ್ ಪೂಜಾರ್ ಉಪಸ್ಥಿತರಿದ್ದರು.  ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕ ಶ್ಯಾಮಸುಂದರ್ ಸ್ವಾಗತಿಸಿದರು.  ಸುದರ್ಶನ್ ನಿರೂಪಿಸಿದರು.  ರಾಜ್ಯಮಟ್ಟದ ವಾಲಿಬಾಲ್ ಕ್ರೀಡಾಕೂಟದಲ್ಲಿ ಕಲಬುರಗಿ ವಿಭಾಗ, ಬೆಳಗಾವಿ, ಬೆಂಗಳೂರು, ಮೈಸೂರು ವಿಭಾಗ ಮಟ್ಟದಿಂದ ಪ್ರಾಥಮಿಕ, ಪ್ರೌಢಶಾಲಾ ವಿಭಾಗದ ತಲಾ ಒಂದು ತಂಡಗಳು ಹಾಗೂ ಭಾಗವಹಿಸಿದ್ದು, ರಾಜ್ಯದ ಕ್ರೀಡಾ ವಸತಿ ಶಾಲೆಯ ಪ್ರೌಢಶಾಲಾ ವಿಭಾಗದ ಬಾಲಕ ಮತ್ತು ಬಾಲಕಿಯರ ತಲಾ ಒಂದು ತಂಡ ಪಂದ್ಯಾವಳಿಯಲ್ಲಿ ಪಾಲ್ಗೊಂಡಿವೆ.  ರಾಜ್ಯ ಮಟ್ಟದ ವಾಲಿಬಾಲ್ ಪಂದ್ಯಾವಳಿ ನ. ೨೮ ಮತ್ತು ೨೯ ರಂದು ಎರಡು ದಿನಗಳ ಕಾಲ ನಡೆಯಲಿದೆ.

ತರುವಂತಾಗಬೇಕು ಎಂದು ಜಿಲ್ಲಾಧಿಕಾರಿ ಎಂ. ಕನಗವಲ್ಲಿ ಶುಭ ಹಾರೈಸಿದರು. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ತ್ಯಾಗರಾಜನ್ ಅವರು ಮಾತನಾಡಿ, ರಾಜ್ಯದಲ್ಲಿ ಪ್ರತಿಭಾವಂತ ಕ್ರೀಡಾಪಟುಗಳಿದ್ದು, ತಮ್ಮ ಪ್ರತಿಭೆ ತೋರಿಸಲು ಇಂತಹ ಅವಕಾಶವನ್ನು ಕ್ರೀಡಾಪಟುಗಳು ಸದುಪಯೋಗ ಪಡಿಸಿಕೊಳ್ಳಬೇಕು.  ವಾಲಿಬಾಲ್ ಕ್ರೀಡೆಯು ಸಹ ಅತ್ಯುತ್ತಮ ಕ್ರೀಡೆಯಾಗಿದ್ದು, ಇದನ್ನು ಜನಪ್ರಿಯಗೊಳಿಸಬೇಕಿದೆ ಎಂದರು.
28 Nov 2015

Advertisement

0 comments:

Post a Comment

:) :)) ;(( :-) =)) ;( ;-( :d :-d @-) :p :o :>) (o) [-( :-? (p) :-s (m) 8-) :-t :-b b-( :-# =p~ $-) (b) (f) x-) (k) (h) (c) cheer
Click to see the code!
To insert emoticon you must added at least one space before the code.

 
Top