PLEASE LOGIN TO KANNADANET.COM FOR REGULAR NEWS-UPDATES

ಕೊಪ್ಪಳ, ಏ.೭  ಕೊಪ್ಪಳ ನಗರದ ವಿವಿಧ ಶಾಲೆಗಳಲ್ಲಿ ಏ.೧೪ ರಿಂದ ಎಸ್‌ಎಸ್‌ಎಲ್‌ಸಿ ವಾರ್ಷಿಕ ಪರೀಕ್ಷೆಯ ಉತ್ತರ ಪತ್ರಿಕೆಗಳ ಮೌಲ್ಯ ಮಾಪನ ನಡೆಯಲಿದ್ದು ಮೌಲ್ಯ ಮಾಪನ ಸುಗಮ ಹಾಗೂ ಶಾಂತಿಯುತವಾಗಿ ನೆಡೆಯುವ ಉದ್ದೇಶದಿಂದ ಪರೀಕ್ಷಾ ಕೇಂದ್ರದ ಸುತ್ತ ೨೦೦ ಮೀ. ವ್ಯಾಪ್ತಿಯಲ್ಲಿ ನಿಷೇದಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿ ಎಂ.ಕನಗವಲ್ಲಿ ಅವರು ಆದೇಶ ಹೊರಡಿಸಿದ್ದಾರೆ. ಏ.೧೪ ರಿಂದ ಎಸ್‌ಎಸ್‌ಎಲ್‌ಸಿ ಮೌಲ್ಯ ಮಾಪನ ಆರಂಭವಾಗಲಿದ್ದು ಮೌಲ್ಯ ಮಾಪನ ಸುಸೂತ್ರವಾಗಿ ಮತ್ತು ದೋಷರಹಿತವಾಗಿ ನಡೆಸುವ ಸಂಬಂಧ, ಅಥವಾ ಮೌಲ್ಯ ಮಾಪನ ಕಾರ್ಯ ಮುಗಿಯುವವರೆಗೂ ಮೌಲ್ಯ ಮಾಪನ ಕೇಂದ್ರಗಳ ಸುತ್ತ ೨೦೦ಮೀ ವ್ಯಾಪ್ತಿಯಲ್ಲಿ ಬೆಳಿಗ್ಗೆ ೯ ಗಂಟೆಯಿಂದ ಸಂಜೆ ೫.೩೦ರ ವರೆಗೆ ನಿಷೇದಾಜ್ಞೆ ಜಾರಿಯಲ್ಲಿರುತ್ತದೆ. ಮೌಲ್ಯ ಮಾಪನ ಕೇಂದ್ರಗಳು: ಕಾಳಿದಾಸ ಪ್ರೌಢ ಶಾಲೆ, ಎಸ್‌ಎಫ್‌ಎಸ್ ಆಂಗ್ಲ ಮಾಧ್ಯಮ ಪ್ರೌಢ ಶಾಲೆ, ಬಾಲಕಿಯರ ಸರಕಾರಿ ಪ.ಪೂ ಕಾಲೇಜು, ಗವಿಸಿದ್ದೇಶ್ವರ ಪ್ರೌಢ ಶಾಲೆಯಲ್ಲಿ ಮೌಲ್ಯ ಮಾಪನ ನಡೆಯಲಿದೆ. ಮೌಲ್ಯ ಮಾಪನ ಪ್ರವೇಶ ಪತ್ರ ಹೊಂದಿದ ನಿಯೋಜಿತ ಶಿಕ್ಷಕರು, ಜಾಗೃತ ದಳದವರನ್ನು ಹೊರತುಪಡಿಸಿ ಇನ್ನುಳಿದವರಿಗೆ ಪರವಾನಿಗೆ ಇಲ್ಲದೇ ಮೌಲ್ಯ ಮಾಪನ ಕೇಂದ್ರದಲ್ಲಿ ಪ್ರವೇಶ ನಿಷೇಧಿಸಲಾಗಿದೆ. ಮೌಲ್ಯ ಮಾಪನಕ್ಕೆ ನಿಯೋಜಿಸಿದ ಸಿಬ್ಬಂದಿ ಮೌಲ್ಯ ಮಾಪನ ಸಮಯದಲ್ಲಿ ಮೊಬೈಲ್ ಉಪಯೋಗಿಸುವಂತಿಲ್ಲ, ಮೌಲ್ಯ ಮಾಪನ ಕೇಂದ್ರದ ಸುತ್ತಲೂ ೨೦೦ ಮೀ ಅಂತರದ ಒಳಗೆ ಜನರು ಮಾರಕಾಸ್ತ್ರ ಹಿಡಿದು ತಿರುಗಾಡುವುದನ್ನು ನಿಷೇಧಿಸಿದೆ, ಈ ಆದೇಶವು ಮದುವೆ, ಶವ ಸಂಸ್ಕಾರಗಳು ಹಾಗೂ ಇನ್ನಿತರ ಧಾರ್ಮಿಕ ಕಾರ್ಯಕ್ರಮಗಳಿಗೆ ಅನ್ವಯವಾಗುವುದಿಲ್ಲ ಎಂದು ಜಿಲ್ಲಾಧಿಕಾರಿ ಎಂ.ಕನಗವಲ್ಲಿ ಅವರು ಆದೇಶದಲ್ಲಿ ತಿಳಿಸಿದ್ದಾರೆ. ವಿಕಲಚೇತನರಿಗೆ ಸಚಿವರಿಂದ ತ್ರಿಚಕ್ರ ವಾಹನ ವಿತರಣೆ ಕೊಪ್ಪಳ ಏ. ೦೭ (ಕರ್ನಾಟಕ ವಾರ್ತೆ): ಜಿಲ್ಲಾ ಪಂಚಾಯತಿ ಶಾಸನಬದ್ಧ ಅನುದಾನ ಹಾಗೂ ೧೩ನೇ ಹಣಕಾಸು ನಿಧಿಯಡಿ ಮಂಜೂರು ಮಾಡಲಾದ ತ್ರಿಚಕ್ರ ವಾಹನಗಳನ್ನು ಜಿಲ್ಲೆಯ ೨೪ ವಿಕಲಚೇತನ ಫಲಾನುಭವಿಗಳಿಗೆ ಜಿಲ್ಲಾ ಉಸ್ತುವಾರಿ ಮತ್ತು ಸಣ್ಣ ನೀರಾವರಿ ಸಚಿವ ಶಿವರಾಜ ಎಸ್ ತಂಗಡಗಿ ಬುಧವಾರದಂದು ವಿತರಿಸಿದರು. ೨೦೧೪-೧೫ ಹಾಗೂ ೨೦೧೫-೧೬ನೇ ಸಾಲಿನ ೧೩ ನೇ ಹಣಕಾಸು ನಿಧಿ ಹಾಗೂ ಜಿಲ್ಲಾ ಪಂಚಾಯತಿ ಶಾಸನಬದ್ಧ ಅನುದಾನದಡಿ ಮಂಜೂರಾದ ತ್ರಿಚಕ್ರ ವಾಹನಗಳನ್ನು ಜಿಲ್ಲಾ ಉಸ್ತುವಾರಿ ಹಾಗೂ ಸಣ್ಣ ನೀರಾವರಿ ಸಚಿವ ಶಿವರಾಜ್ ತಂಗಡಗಿ ಅವರು ಜಿಲ್ಲೆಯ ೨೪ ವಿಕಲಚೇತನ ಫಲಾನುಭವಿಗಳಿಗೆ ಜಿಲ್ಲಾ ಪಂಚಾಯತ್, ಆವರಣದಲ್ಲಿ ಏ. ೦೬ ಬುಧವಾರದಂದು ವಿತರಿಸಿದರು. ಕೊಪ್ಪಳ ಶಾಸಕ ರಾಘವೇಂದ್ರ ಹಿಟ್ನಾಳ, ನಗರಸಭೆ ಅಧ್ಯಕ್ಷ ಮಹೇಂದ್ರ ಛೋಪ್ರಾ, ಜಿ.ಪಂ. ಸದಸ್ಯ ವಿಶ್ವನಾಥ ರೆಡ್ಡಿ, ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಆರ್. ರಾಮಚಂದ್ರನ್ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ತ್ಯಾಗರಾಜನ್ ಉಪಸ್ಥಿತರಿದ್ದರು.

07 Apr 2016

Advertisement

0 comments:

Post a Comment

:) :)) ;(( :-) =)) ;( ;-( :d :-d @-) :p :o :>) (o) [-( :-? (p) :-s (m) 8-) :-t :-b b-( :-# =p~ $-) (b) (f) x-) (k) (h) (c) cheer
Click to see the code!
To insert emoticon you must added at least one space before the code.

 
Top